• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಗಾಳಿಸುದ್ದಿ : ಮಾಜಿ ಸಿಎಂ ಹೆಚ್​ಡಿಕೆ

Any Mind by Any Mind
June 12, 2023
in ರಾಜಕೀಯ
0
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಗಾಳಿಸುದ್ದಿ : ಮಾಜಿ ಸಿಎಂ ಹೆಚ್​ಡಿಕೆ
Share on WhatsAppShare on FacebookShare on Telegram

ರಾಮನಗರ/ ಚೆನ್ನಪಟ್ಟಣ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರದ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ADVERTISEMENT

ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ.ಗೆದ್ದ ಸೋತ ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದು ಅವರು ನೇರವಾಗಿ ಹೇಳಿದರು.

ನೀವು ರಾಷ್ಟ್ರ ರಾಜಕಾರಣದ ಬಗ್ಗೆ ಒಲವು ವಿಚಾರ ಹೊಂದಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು; ನನಗೆ ರಾಷ್ಟ್ರ ರಾಜಕಾರಣದ ಮೇಲೆ ಒಲವಿಲ್ಲ. ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ. ನಂದುಬಿಡಿ, ಹಾಲಿ ಸಂಸದರ ಕಥೆಯೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ? ಎಂದು ಸಂಸದ ಡಿ.ಕೆ.ಸುರೇಶ್ ಹೆಸರು ಪ್ರಸ್ತಾಪಿಸದೇ ಹೆಚ್‌ಡಿಕೆ ಟಾಂಗ್ ಕೊಟ್ಟರು.

ಗ್ಯಾರಂಟಿಗಳ ಬಗ್ಗೆ ಗೊಂದಲವಿದೆ:

ಶಕ್ತಿ ಯೋಜನೆಗೆ ಚಾಲನೆ ನೀಡಿದ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅವರು; ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ತಿವಿ ಅಂತಿದ್ದಾರೆ. ಅದರೆ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಈಗಾಗಲೇ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೀವಿ ಅಂದ್ರು, ಈಗ ಮನೆ ಮಾಲೀಕರು ಬಾಡಿಗೆದಾರರ ಜತೆ ಅಗ್ರಿಮೆಂಟ್ ಮಾಡಿಕೊಳ್ಳುತ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದರು. ಈಗ ಅದನ್ನೆಲ್ಲ ಯಾವರೀತಿ ನಿಬಾಯಿಸುತ್ತಾರೆ ನೋಡಬೇಕು ಎಂದರು ಕುಮಾರಸ್ವಾಮಿ ಅವರು.

Tags: BJPdk sureshHD KumaraswamyJDSLok Sabha Electionsramanagara
Previous Post

‘ಶಕ್ತಿಯೋಜನೆ ವಿರೋಧಿಸುವವರು ಮನುವಾದಿಗಳು ’ : ಸಚಿವ ಡಾ. ಹೆಚ್​.ಸಿ ಮಹೇದವಪ್ಪ ಟಾಂಗ್​

Next Post

ಡಿಸಿಎಂ ಡಿಕೆಶಿ ವಿರುದ್ಧ ಹೆಚ್​ಡಿಕೆ ಕೆಂಡಾಮಂಡಲ : 40% ಕಮಿಷನ್​ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
Next Post
ಡಿಸಿಎಂ ಡಿಕೆಶಿ ವಿರುದ್ಧ ಹೆಚ್​ಡಿಕೆ ಕೆಂಡಾಮಂಡಲ : 40% ಕಮಿಷನ್​ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು

ಡಿಸಿಎಂ ಡಿಕೆಶಿ ವಿರುದ್ಧ ಹೆಚ್​ಡಿಕೆ ಕೆಂಡಾಮಂಡಲ : 40% ಕಮಿಷನ್​ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada