ದೆಹಲಿ : WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ ಎಂಬ ವದಂತಿಗಳನ್ನು ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಹಾಗೂ ಬಜರಂಗ್ಪುನಿಯಾ ತಳ್ಳಿ ಹಾಕಿದ್ದು ನ್ಯಾಯ ಸಿಗುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದಿದ್ದಾರೆ.
ಇದು ಸಂಪೂರ್ಣ ಸುಳ್ಳು ಸುದ್ದಿ . ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಿಂದ ಹಿಂದೆ ಸರಿಯುವ ಮಾತೇ ಇಲ್ಲ. ಸತ್ಯಾಗ್ರಹದ ಜೊತೆಯಲ್ಲಿಯೇ ರೈಲ್ವೆ ಇಲಾಖೆಯ ನನ್ನ ಜವಾಬ್ದಾರಿಯನ್ನೂ ನಾನು ನಿರ್ವಹಿಸುತ್ತಿದ್ದೇನೆ . ದಯವಿಟ್ಟು ಯಾವುದೇ ತಪ್ಪು ಸುದ್ದಿಗಳನ್ನು ಹರಡಿಸಬೇಡಿ ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.
ನಮ್ಮ ಹೋರಾಟಕ್ಕೆ ಹಾನಿಯುಂಟು ಮಾಡಲು ಈ ರೀತಿಯ ಸುದ್ದಿಯನ್ನು ಹರಡಲಾಗುತ್ತಿದೆ, ನಾವು ಈ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಚಳವಳಿಯನ್ನು ಹಿಂಪಡೆಯುವುದಿಲ್ಲ ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.