ಭಾರತಕ್ಕೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಪೂರೈಸುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ರಾಜ್ಯ ಸಚಿವ ರಾಮೇಶ್ವರ ತೈಲಿ ಹೇಳಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ದಾಳಿ ಹಿನ್ನೆಲೆಯಲ್ಲಿ ಭಾರತಕ್ಕೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಪೂರೈಸುವುದಾಗಿ ರಷ್ಯಾ ಭರವಸೆ ನೀಡಿತ್ತು. ಆದರೆ ಕೇಂದ್ರ ಸರಕಾರ ರಷ್ಯಾದಿಂದ ಆಮದು ಮಾಡಿಕೊಳ್ಳುವ ತೈಲ ಜೊತೆ ಇತರೆ ತೈಲ ಉತ್ಪನಗಳ ಕುರಿತು ಗಮನ ಹರಿಸುತ್ತಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ 14 ವರ್ಷಗಳಲ್ಲೇ ಗರಿಷ್ಠ 139 ಡಾಲರ್ ತಲುಪಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಕೂಡ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ದರಗಳು ಸತತ ಏರಿಕೆ ಕಾಣುತ್ತಿದೆ. ಕಳೆದ 9 ದಿನದಲ್ಲಿ 6.4 ರೂ. ಏರಿಕೆ ಮಾಡಲಾಗಿದೆ.