• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಸ್. ಆರ್. ಬೊಮ್ಮಾಯಿ ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆ ಮಾಡಿ ಯಶಸ್ವಿಯಾದರು : ಬಿ.ಎಸ್. ಯಡಿಯೂರಪ್ಪ

Any Mind by Any Mind
June 6, 2023
in Top Story, ಕರ್ನಾಟಕ, ರಾಜಕೀಯ
0
ಎಸ್. ಆರ್. ಬೊಮ್ಮಾಯಿ ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆ ಮಾಡಿ ಯಶಸ್ವಿಯಾದರು : ಬಿ.ಎಸ್. ಯಡಿಯೂರಪ್ಪ
Share on WhatsAppShare on FacebookShare on Telegram

ಬೆಂಗಳೂರು: ದಿವಂಗತ ಎಸ್. ಆರ್. ಬೊಮ್ಮಾಯಿಯವರು ಕರ್ನಾಟಕವನ್ನು ಪರ್ಯಾಯ ರಾಜಕಾರಣದ ಪ್ರಯೋಗ ಶಾಲೆಯನ್ನಾಗಿ ಮಾಡಿ ಯಶಸ್ವಿಯಾದರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಂದು ಶ್ರೀಮತಿ ಗಂಗಮ್ಮಾ ಸೋಮಪ್ಪ ಬೊಮ್ಮಾಯಿ ಎಜುಕೇಶನಲ್ ಮತ್ತು ವೆಲ್ ಪೇರ್ ಫೌಂಡೇಶನ್ ವತಿಯಿಂದ ಗಾಂಧಿಭವನದಲ್ಲಿ ಏರ್ಪಡಿಸಿದ್ದ ಹಿರಿಯ ಮುತ್ಸದ್ದಿ ದಿ. ಎಸ್.ಆರ್. ಬೊಮ್ಮಾಯಿಯವರ ಜನ್ಮ ಶತಮಾನೋತ್ಸವ ಆಚರಣೆ, ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್ ಆರ್ ಬೊಮ್ಮಾಯಿಯವರು ವಿದ್ಯಾರ್ಥಿಯಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದರು . ಕರ್ನಾಟಕ ಏಕೀಕರಣ, ಚಲೆ ಜಾವ್ ಚಳುವಳಿ, ಗೇಣಿದಾರರ ಪರ ಹೋರಾಟ‌ಮಾಡಿದ್ದರು.

ADVERTISEMENT


ಜನರ ಅಧಿಕಾರವನ್ನು ಜನರಿಗೆ ವಹಿಸುವ ತೀರ್ಮಾನ ಐತಿಹಾಸಿಕವಾಗಿದೆ. ಕಡಿಮೆ ಅವಧಿ ಅಧಿಕಾರ ನಡೆಸಿದರೂ ಅವರು ತೆಗೆದುಕೊಂಡ ತೀರ್ಮಾಣ ಐತಿಹಾಸಿಕವಾಗಿವೆ. ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಅವರ ತಂದೆಯ ರೀತಿ ಅಧಿಕಾರ ನಡೆಸಿ, ನೀರಾವರಿ ಸಚಿವರಾಗಿ ರಾಜ್ಯದ ಹಿತಕ್ಕೆ ಧಕ್ಕೆ ಬಾರದಂತೆ ನಡೆದು ಕೊಂಡಿದ್ದಾರೆ. ಜನ ನಾಯಕರಾಗಿ ಬೊಮ್ಮಾಯಿಯವರು ತೆಗೆದುಕೊಂಡ ತೀರ್ಮಾನವನ್ನು ರಾಜ್ಯದ ಜನತೆ ಎಂದಿಗೂ‌ ಮರೆಯುವುದಿಲ್ಲ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಎಸ್. ಆರ್. ಬೊಮ್ಮಾಯಿ ಅವರ ಕುರಿತ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಎಸ್. ಆರ್. ಬೊಮ್ಮಾಯಿಯವರು ರಾಜಕಾರಣ ಮಾಡುವ ಕಾಲಘಟ್ಟ ಹಿಂತಿರುಗಿ ನೋಡಿದಾಗ ಅವರು ಮಾಡಿದ ಹೋರಾಟ ಅವರ ಪರವಾಗಿ ಆಗಿದ್ದು ಒಂದು ವಿಸ್ಮಯ ಎಂದರು.
ಅಲ್ಲಿಯವರೆಗೂ ರಾಜ್ಯಪಾಲರು ಎಲ್ಲ ವಿಧವಾದ ಆಟವಾಡುತ್ತಿದ್ದರು.

ನಾನು ಅನೇಕ ಉದಾಹರಣೆಗಳನ್ನು ಪ್ರತ್ಯಕ್ಷವಾಗಿ ನೋಡಿದ್ದೇನೆ. ಬೂಟಾ ಸಿಂಗ್ ಅವರು ಶಾಸಕರನ್ನು ರಾಜಭವನದಲ್ಲಿ ಕರೆದುಕೊಂಡು ಮಲಗಿದ ಉದಾಹರಣೆ ನೋಡಿದ್ದೇನೆ. ಆದರೂ ಬೊಮ್ಮಾಯಿಯವರು ದೃತಿಗೆಡದೇ ಸುಪ್ರೀಂಕೋರ್ಟ್ ವರೆಗೆ ತೆಗೆದುಕೊಂಡು ಹೊಗಿ ಜಯ ಗಳಿಸಿದ್ದು ಐತಿಹಾಸಿಕ ಕ್ಷಣ. ಕೆಲವು ರಾಜ್ಯಪಾಲರು ಅಧಿಕಾರ ದುರುಪಯೋಗ ಪಡೆಸಿಕೊಂಡಿರುವುದನ್ನು ನೋಡಿದ್ದೇನೆ ಎಂದರು. ಎಸ್ ಆರ್ ಬೊಮ್ಮಾಯಿಯವರು ಎತ್ತರದ ಧ್ವನಿಯಲ್ಲಿ ಮಾತನಾಡಿದವರಲ್ಲ. ಅವರಂತೆಯೇ ಅವರ ಪುತ್ರ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದರು. ಪ್ರಜಾಪ್ರಭುತ್ವ ಎತ್ತ ಕಡೆ ಹೋಗುತ್ತಿದೆ ಎನ್ನುವುದನ್ನು ನೋಡಿದರೆ ಇತ್ತೀಚೆಗೆ ನಡೆದ ಚುನಾವಣೆ ಉದಾಹರಣೆ. ಹಣ ಎಷ್ಟು ಮಹತ್ವದ ಪಾತ್ರ ವಹಿಸಿದೆ ಎನ್ನುವುದನ್ನು ನೋಡಿದರೆ ಪ್ರಜಾಪ್ರಭುತ್ವ ಎತ್ತ ಸಾಗುತ್ತಿದೆ ಎನ್ನುವ ಆತಂಕ ಮೂಡಿದೆ. ಹಣದ ಹೊಳೆ ತಡೆಯದಿದ್ದರೆ ಪ್ರಜಾಪ್ರಭುತ್ವ ಗಂಡಾಂತರಕ್ಕೆ ಹೋಗುತ್ತದೆ ಎನ್ನುವ ಆತಂಕ ಇದೆ. ಇದರ ಬಗ್ಗೆ ನಾಡಿನ ಹಿತ ಚಿಂತಕರು ಗಂಭೀರವಾಗಿ ಆಲೋಚಿಸಬೇಕಿದೆ ಎಂದರು. ದೇಶದಲ್ಲಿ ಚುನಾವಣಾ ಆಯೊಗ ಇದೆ ಎನ್ನುವುದು ಬಹುತೇಕರಿಗೆ ಗೊತ್ತಿಲ್ಲ. ಟಿ.ಎನ್. ಶೇಷನ್ ಅವರು ಇದ್ದಾಗ ಮಾತ್ರ ಚುನಾವಣಾ ಆಯೊಗ ಸೂಕ್ತ ಕಾರ್ಯ ನಿರ್ವಹಿಸಿತ್ತು. ಆ ನಂತರ ಚುನಾವಣಾ ಆಯೋಗ ತನ್ನ ಪಾತ್ರ ನಿರ್ವಹಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಹಣದ ಪ್ರಭಾವ ಹೆಚ್ಚಾಗುತ್ತಿದೆ : ಆರ್. ವಿ. ದೇಶಪಾಂಡೆ
ಈಗಿನ ಚುನಾವಣೆಯಲ್ಲಿ ಹಣದ ಪ್ರಭಾವ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸುವ ಕೆಲಸ ಮಾಡಬೇಕಿದೆ. ನಾವು ದಾರಿ ತಪ್ಪುತ್ತಿದ್ದೇವೆ. ಅದಕ್ಕೆ ನಿಯಂತ್ರಣ ಹಾಕಬೇಕಿದೆ ಎಂದು ಮಾಜಿ ಸಚಿವ ಆರ್. ವಿ. ದೇಶಪಾಂಡೆ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾವು ರಾಜಕೀಯ ವಾಗಿ ಬೆಳೆದಿದ್ದರೆ ರಾಮಕೃಷ್ಣ ಹೆಗಡೆ, ದೇವೇಗೌಡರು ಮತ್ತು ಬೊಮ್ಮಾಯಿಯವರು ಕಾರಣ. ನಾನು, ಸಿಂದ್ಯಾ, ಜೀವರಾಜ ಎಲ್ಲರೂ ಯುವಕರು. ಎಸ್. ಆರ್. ಬೊಮ್ಮಾಯಿಯವರಲ್ಲಿ ಶಿಸ್ತು ಇತ್ತು. ನಾವು ಈ ಮಟ್ಟಕ್ಕೆ ಬರಲು ಇವರೆಲ್ಲರೂ ಕಾರಣರು ಎಂದರು.


ರಾಮಕೃಷ್ಣ ಹೆಗಡೆ ಅವರು ಸಿಎಂ ಆಗಿದ್ದಾಗ 16 ಜನ ಸಚಿವರನ್ನು ಕೈ ಬಿಟ್ಟರು. ಬೊಮ್ಮಾಯಿಯವರಿಗೆ ನನ್ನ ಮೇಲೆ ಬಹಳ ಪ್ರೀತಿ ಅವರ ಬಳಿ ಹೋಗಿ ಕೇಳಿದೆ. ಅವರು ರಾಮಕೃಷ್ಣ ಹೆಗಡೆ ಅವರ ಬಳಿ ಕಳಿಸಿದರು. ಅವರ ಬಳಿ ಹೋಗಿ ಕೇಳಿದಾಗ ಜಿಲ್ಲಾ ಪಂಚಾಯತಿ ಚುನಾವಣೆ ಗೆದ್ದು ಬನ್ನಿ ಆಗ ಪ್ರಶ್ನೆ ಕೇಳಿ ಅಂದರು, ನಾವು ಚುನಾವಣೆ ಗೆದ್ದು ಬಂದೆವು ನಮಗೆ ಸಂಪುಟ ಸಚಿವರನ್ನಾಗಿ ಮಾಡಿದರು. ಆಗ ಸಂಪುಟದಲ್ಲಿ ಸಚಿವರಾಗುವುದು ಬಹಳ ಕಷ್ಟ ಇತ್ತು ಎಂದು ಹಳೆಯ ದಿನಗಳನ್ನು ನೆನೆದರು.
ಎಸ್. ಆರ್. ಬೊಮ್ಮಾಯಿಯವರು ಒಳ್ಳೆಯ ಆಡಳಿತಗಾರರಾಗಿದ್ದರು. ಅವರ ಸರ್ಕಾರ ಪ್ರತಿಪಕ್ಷದಿಂದ ಹೋಗಿರಲಿಲ್ಲ. ಯಡಿಯೂರಪ್ಪ ಅವರ ಸಹಕಾರದಿಂದ ರಾಮಕೃಷ್ಣ ಹೆಗಡೆ ಅವರ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಅದನ್ನು ನೆನೆಯಬೇಕು ಎಂದರು.


ನಾವು ಜನತಾ ಪಾರ್ಟಿ 1983 ರಲ್ಲಿ ಅಧಿಕಾರಕ್ಕೆ ಬರುತ್ತದೆ ಅಂತ ಭಾವಿಸಿರಲಿಲ್ಲ. ಬೊಮ್ಮಾಯಿಯವರು, ದೇವೇಗೌಡರು, ರಾಮಕೃಷ್ಣ ಹೆಗಡೆ ಅವರು ಸೇರಿ ಜನತಾ ಪಕ್ಷ ಸರ್ಕಾರ ಅಧಿಕಾರಕ್ಕೆ ತಂದರು. ಜನತಾ ಪರಿವಾರದ ನಾಯಕರ ಜಗಳ ಆಡದಿದ್ದರೆ ಈಗಲೂ ಜನತಾ ಪಕ್ಷ ಅಧಿಕಾರದಲ್ಲಿ ಇರುತ್ತಿತ್ತು ಎಂದು ಹೇಳಿದರು.
ಸುತ್ತೂರು ಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಎಸ್. ಆರ್. ಬೊಮ್ಮಾಯಿಯವರು. ರಾಜಕೀಯದಲ್ಲಿ ಸರಳತೆ, ಸೌಜನ್ಯತೆ ಉಳಿಸಿಕೊಂಡಿದ್ದರು ಅವರು ಎಂ ಎನ್ ರಾಯ್ ಅವರ ಭಾಷಣದಿಂದ ಪ್ರೇರಣೆಯಾದವರು. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು, ಜಯಪ್ರಕಾಶ್ ನಾರಾಯಣ ಹೋರಾಟದಿಂದ ಪ್ರಭಾವಿತರಾಗಿ ರಾಜಕೀಯ ಪ್ರವೇಶ ಮಾಡಿದವರು.


ರಾಜಕೀಯ ಕ್ಷೇತ್ರದಲ್ಲಿ ಸಂವಿಧಾನದ ಮುಖ್ಯಸ್ಥರಾದವರು ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ತೋರಿಸಿಕೊಟ್ಟವರು ಎಸ್. ಆರ್. ಬೊಮ್ಮಾಯಿಯವರು. ಅವರು ಸ್ವತಃ ವಕೀಲರಾಗಿದ್ದರಿಂದ ರಾಜ್ಯಪಾಲರಾದವರು ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ತೋರಿಸಿಕೊಟ್ಟವರು ಎಸ್. ಆರ್. ಬೊಮ್ಮಾಯಿ. ಪಕ್ಷದ ಒಳಗಿನ ಸಂಘರ್ಷವನ್ನು ಸಮನ್ವಯತೆಯಿಂದ ನಡೆಸಿಕೊಂಡು ಹೋದವರು ಎಸ್. ಆರ್.ಬೊಮ್ಮಾಯಿಯವರು. ಅವರು ಸಿಎಂ ಆಗಿ, ಕೇಂದ್ರದ ಸಚಿವರಾಗಿ ಕೆಲಸ ಮಾಡಿದವರು. ವೀರೇಂದ್ರ ಪಾಟೀಲರು ಚುನಾವಣೆಯಲ್ಲಿ ನಿಂತು ಸೋತಾಗ ಅವರ ಪರವಾಗಿ ನಿಂತವರು. ರಾಜಕೀಯದಲ್ಲಿ ಇದ್ದರೂ ಉತ್ತಮ ಜೀವನ ನಡೆಸಿದವರು ಬೊಮ್ಮಾಯಿ. ಪ್ರಜಾಪ್ರಭುತ್ವ ಹಣದ ಮುಂದೆ ದಾರಿ ತಪ್ಪುತ್ತಿದೆ ಎನ್ನುವ ಚರ್ಚೆ ನಡೆಯುತ್ತಿದೆ‌ ಇದನ್ನು ದಾರಿಗೆ ತರುವವರು ಯಾರು ಎನ್ನುವ ಪ್ರಶ್ನೆ ಇದೆ‌. ಪ್ರಜಾಪ್ರಭುತ್ವ ವನ್ನು ದಾರಿಗೆ ತರುವ ಕೆಲಸ ಮತದಾರರ ಮೇಲೆ ಇದೆ.
ಮತದಾರರು ರಾಜಕಾರಣಿಗಳ ಮೇಲೆ ಹಾಕುತ್ತಾರೆ. ರಾಜಕಾರಣಿಗಳು ಮತದಾರರ ಮೇಲೆ ಹಾಕುತ್ತಾರೆ. ಚುನಾವಣೆಯಲ್ಲಿ ಯಾವ ಬಣ್ಣದ ನೋಟು ಬರುತ್ತದೆ ಎಂದು ಕೇಳುವ ಪರಿಸ್ಥಿತಿ ಇದೆ. ಯಾರಿಂದ ಹಣ ಪಡೆದಿದ್ದಾರೆ ಅವರಿಗೆ ಮತ ಹಾಕಬೇಕೆಂಬ ನೈತಿಕತೆಯೂ ಇಲ್ಲದಂತಾಗಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಿಜಿಆರ್ ಸಿಂಧ್ಯಾ, ಬಿ.ಎಲ್. ಶಂಕರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಹೇಶ ಬೊಮ್ಮಾಯಿ, ನಿವೃತ್ತ ಐಎಎಸ್ ಅಧಿಕಾರಿ ಡಾ. ಸಿ.‌ಸೋಮಶೇಖರ ಹಾಜರಿದ್ದರು.

Tags: BJPBJP GovernmentbjpkarnatakabsyediyurappaCongress Partylatestnewssmkrishnasr bommai
Previous Post

ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ

Next Post

ತಂದೆಯನ್ನು ನೆನೆದು ಭಾವುಕರಾದ ಬಸವರಾಜ ಬೊಮ್ಮಾಯಿ

Related Posts

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
0

ಒಳಮೀಸಲಾತಿ – ಚಾರಿತ್ರಿಕ ಪ್ರಮಾದವನ್ನು ಸರಿಪಡಿಸುವ ಒಂದು ಮಾರ್ಗ ಎಂಬ ಪರಿವೆ ಇರಲಿ ನಾ ದಿವಾಕರ ಭಾಗ  4  ಕಳೆದ ಮೂರು ದಶಕಗಳಿಂದ ಸಾಂವಿಧಾನಿಕ ಅವಕಾಶವಂಚಿತ, ಸೌಲಭ್ಯ...

Read moreDetails
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
Next Post
ತಂದೆಯನ್ನು ನೆನೆದು ಭಾವುಕರಾದ ಬಸವರಾಜ ಬೊಮ್ಮಾಯಿ

ತಂದೆಯನ್ನು ನೆನೆದು ಭಾವುಕರಾದ ಬಸವರಾಜ ಬೊಮ್ಮಾಯಿ

Please login to join discussion

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada