2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಆಯಾ ಪಕ್ಷಗಳ ಭರ್ಜರಿ ಮತ ಪ್ರಚಾರ ಕೈಗೊಂಡಿದ್ದಾರೆ. ಇಂದು ಬಿಜೆಪಿ ನಾಯಕ ಎಸ್.ಆರ್.ವಿಶ್ವನಾಥ್ ನಾಮಪತ್ರ ಸಲ್ಲಿಸಿದ್ದಾರೆ. ನಾನು ಒಂದು ಲಕ್ಷಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ.

ಕ್ಷೇತ್ರದಲ್ಲಿ 40 ವರ್ಷಗಳಿಂದ ಸೇವೆ ಮಾಡಿಕೊಂಡು ಬಂದಿದ್ದೇನೆ. 65ರಿಂದ 70 ಕೋಟಿ ಆಸ್ತಿ ಘೋಷಣೆ ಮಾಡಿದ್ದೇನೆ. ನಾನು ಪೋಲೀಸರ ಬಲ ಬಳಸಿಲ್ಲ. ನೀತಿ ಸಂಹಿತೆ ಉಲ್ಲಂಘನೆ ಆದಾಗ ದೂರು ನೀಡಿದ್ದೇನೆ. ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಯೋಗಿ ಬರುವ ಬಗ್ಗೆ ಚರ್ಚೆಯಾಗ್ತಿದೆ ಅಂತ ನಾಮಪತ್ರ ಸಲ್ಲಿಕೆ ಬಳಿಕ ಎಸ್.ಆರ್ ವಿಶ್ವನಾಥ್ ಹೇಳಿಕೆ ನೀಡಿದರು.