ಜನವರಿ 22ರಂದು ನಡೆಯಲಿರುವ ಅಯೋಧ್ಯೆಯ(Ayodhya) ರಾಮಮಂದಿರ(Rama Mandira) ಉದ್ಘಾಟನೆ ಹಿನ್ನೆಲೆಯಲ್ಲಿ ಭಾರತದ ಖ್ಯಾತ ಕ್ರಿಕೆಟಿಗ(Cricketer) ಸಚಿನ್ ತೆಂಡುಲ್ಕರ್(Sachin Tendulkar) ಅವರಿಗೆ ಆಹ್ವಾನ ನೀಡಲಾಯಿತು.
ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರನ್ನು ಭೇಟಿಯಾದ ಶ್ರೀ ರಾಮ ಪ್ರಾಣಪ್ರತಿಷ್ಠಾಪನ ಟ್ರಸ್ಟ್‌ನ ಸದಸ್ಯರು, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರಿಗೆ ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆಯನ್ನು ನೀಡಿ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಆತ್ಮೀಯ ಆಹ್ವಾನ ನೀಡಿದರು.
ಐತಿಹಾಸಿಕ ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಭಾರತ ಸೇರಿದಂತೆ ಇಡೀ ವಿಶ್ವವೇ ಎದುರು ನೋಡುತ್ತಿದೆ. ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆಯಲಿರುವ ಈ ದಿನಕ್ಕಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದು, ರಾಮಮಂದಿರ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದೆ.