• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇರಳದಲ್ಲಿ ಕೇರಳ ಕುರಿ, ಮೇಕೆ, ಎಮ್ಮೆ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in ದೇಶ, ರಾಜಕೀಯ
0
ಸರ್ಕಾರಕ್ಕೆ ವರ್ಷದ ಸಂಭ್ರಮ.. ಸರ್ಕಾರದ ಕಾಲೆಳೆದ ವಿಪಕ್ಷಗಳು..
Share on WhatsAppShare on FacebookShare on Telegram

ಬೆಂಗಳೂರು(Bangalore): ಕೇರಳದಲ್ಲಿ ಕೇರಳ ಕುರಿ, ಕೋಳಿ, ಮೇಕೆ, ಎಮ್ಮೆ ಬಲಿಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ(State Government) ಇನ್ನೊಂದು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ADVERTISEMENT

ವಿಧಾನಸೌಧದಲ್ಲಿ(Vidana Soudha) ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಇವರು ಪ್ರತಿಯೊಂದಕ್ಕೂ ಎಸ್ ಐಟಿ(SIT) ರಚನೆ ಮಾಡಿ ತನಿಖೆ ಮಾಡಿಸುತ್ತಾರೆ, ಅಲ್ಲವೇ? ಬಲಿ ವಿಷಯಕ್ಕೂ ತನಿಖೆ(Investigation) ಮಾಡಿಸಲಿ ಎಂದು ಸವಾಲು(Challenge) ಹಾಕಿದರು. ಇದು ಡಿಸಿಎಂ ಡಿಕೆ ಶಿವಕುಮಾರ್(DK Shiva Kumar) ನೀಡಿರುವ ನೀಡಿಕೆ ಅಲ್ಲವೇ? ನಾನು ಮಾಧ್ಯಮಗಳ ಮೂಲಕವೇ ಗಮನಿಸಿದೆ. ಸಿಎಂ ಮತ್ತು ನನ್ನ ವಿರುದ್ಧ(Opposite) ಮಾಡಿಸುತ್ತಿರುವ ಶತ್ರು ಭೈರವಿ ಯಾಗ ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ ವಿರುದ್ಧ ವಾಮಾಚಾರ(Blackmagic) ಎಂದರೆ ಸಾಮಾನ್ಯವೇ? ಹಾಗಾಗಿ ಅದರ ತನಿಖೆಗೂ ಒಂದು ಎಸ್ಐಟಿ ರಚನೆ ಮಾಡಲಿ ಎಂದು ಅವರು ಹೇಳಿದರು.

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು
ಡಿಸಿಎಂ ಅವರು ಹೇಳಿದ್ದಾರೆ. ಇದು ಮಾಟ ಮಂತ್ರ ಎಂದು ಕಥೆ(Story) ಕಟ್ಟಿದ್ದಾರೆ. ಅವರ ಅಷ್ಟೂ ಹೇಳಿಕೆಯನ್ನು ಗಮನಿಸಿದ್ದೇನೆ. ಒಂದು ಮಾತನ್ನು ಹೇಳಲು ಬಯಸುತ್ತೇನೆ. ‘ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು.’ ಎಂದು. ದಾಸಶ್ರೇಷ್ಠ ಪುರಂದರದಾಸರು(Purandaradasa) ರಚಿಸಿರುವ ಪದವಿದು. ಅವರು ಹೇಳಿಕೆ ಕೊಡುವ ಮುನ್ನ ತಾವು ಅಲಂಕರಿಸಿರುವ ಹುದ್ದೆಯ ಘನತೆ ಅರಿಯಬೇಕಿತ್ತು. ಅವರಿಗೆ ಆ ಸ್ಥಾನದ ಮೌಲ್ಯ ಇನ್ನೂ ಅರ್ಥವಾಗಿಲ್ಲ ಎಂದು ಅವರು ಟೀಕಿಸಿದರು.


ರಾಜರಾಜೇಶ್ವರಿ ಅಮ್ಮನವರಿಗೆ ಅಪಪ್ರಚಾರ
‘ಲೋಕದ ಡೊಂಕ ನೀವೇಕೆ ತಿದ್ದುವಿರಿ..’ ಎಂದು ಈ ಹಿಂದೆ ಡಿಕೆಶಿ ಹೇಳಿದ್ದ ವಚನವನ್ನು ಉಲ್ಲೇಖಿಸಿ ಟಾಂಗ್ ಕೊಟ್ಟ ಕುಮಾರಸ್ವಾಮಿ(Kumar Swamy) ಅವರು; ನಾನು ಅವರ ಮಾತನ್ನು ಅವರಿಗೇ ಹೇಳಲು ಬಯಸುತ್ತೇನೆ. ಮೊದಲು ನಿಮ್ಮ ಮನಸ್ಸು ಶುದ್ಧ ಮಾಡಿಕೊಳ್ಳಿ. ಅದೆಂತದೋ ಶತ್ರು ಭೈರವಿ(Bhyravi) ಯಾಗವಂತೆ. ಅವರಿಗೆ ಭಕ್ತಿ ಇದೆಯಂತೆ. ಪವಿತ್ರ ಪುಣ್ಯಕ್ಷೇತ್ರ ಶ್ರೀ ರಾಜರಾಜೇಶ್ವರಿ(Rajarajeshwari) ಅಮ್ಮನವರ ಸನ್ನಿಧಾನಕ್ಕೆ ಅವರೂ ಹೋಗಿದ್ದಾರೆ. ಅವರಿಗೆ ಈ ಯಾಗದ ಬಗ್ಗೆ ಪೂರ್ಣ ಮಾಹಿತಿ ಇರಬೇಕು. ಅಲ್ಲಿ ಯಾವ ರೀತಿಯ ಪೂಜೆ(Pooja) ನಡೆಯುತ್ತದೆ? ಆ ಕ್ಷೇತ್ರ ಮಹಿಮೆ ಏನು ಎನ್ನುವುದು ಅವರಿಗೆ ತಿಳಿದಿರುತ್ತದೆ ಅಲ್ಲವೇ? ಹಾಗಿದ್ದರೂ ಅವರು ಸುಳ್ಳು(Lie) ಹೇಳಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ಅಪಪ್ರಚಾರ(Slander) ಎಸಗಿದ್ದಾರೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ(Outrage) ವ್ಯಕ್ತಪಡಿಸಿದರು.

ನಮ್ಮ ಕುಟುಂಬದ ಕೋಣ, ಮೇಕೆ ಕಡಿಯಲ್ಲ
ಅವರು ನಮ್ಮ ಕುಟುಂಬದ ಮೇಲೆ ಏನೆಲ್ಲಾ ಚಿತಾವಣೆ(Casting) ನಡೆಸುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ನಮ್ಮ ಕುಟುಂಬದಲ್ಲಿ(Family) ಕುರಿ, ಮೇಕೆ, ಎಮ್ಮೆ, ಕೋಣ ಕಡಿಯೋದು ಯಾವತ್ತೂ ನಡೆದಿಲ್ಲ. ಅಂತಹ ಸಂಪ್ರದಾಯ(Tradition) ನಮ್ಮ ಕುಟುಂಬದಲ್ಲಿ ಇಲ್ಲ. ಪ್ರತಿ ತಿಂಗಳು ನಾನು ಜೆಪಿ ನಗರದಲ್ಲಿರುವ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸುತ್ತೇನೆ. ನಮ್ಮ ತಂದೆಯವರು(Father) ಪೂಜೆ ಮಾಡಿಸುತ್ತಾರೆ. ನಮ್ಮಿಬ್ಬರ ಆರೋಗ್ಯದ ಸಮಸ್ಯೆ(Health Issues) ಹಿನ್ನೆಲೆಯಲ್ಲಿ ಪೂಜೆ ಮಾಡಿ ದೈವಕ್ಕೆ ಪ್ರಾರ್ಥನೆ(Prayer) ಸಲ್ಲಿಸುತ್ತೇವೆ. ಇನ್ನೊಬ್ಬರಿಗೆ ಕೇಡು ಬಯಿಸಲು ಪೂಜೆ ಮಾಡಿಲ್ಲ, ಮಾಡುವುದೂ ಇಲ್ಲ ಎಂದರು ಕುಮಾರಸ್ವಾಮಿ ಅವರು.

ಕೋಣ, ಹಂದಿ ಕೂಯ್ದು ಕೇಡು ಬಯಸಲ್ಲ ನಾವು, ಕೇಡು ಬಯಸೋದು ಅವರ ಸಂಸ್ಕೃತಿ ಎಂದು ಡಿಕೆಶಿ(DKS) ವಿರುದ್ಧ ಕಿಡಿಕಾರಿದ ಅವರು; ದೇವೇಗೌಡರ(Devegowda) ಅರವತ್ತು ವರ್ಷಗಳ ರಾಜಕೀಯ(Politics) ಜೀವನದಲ್ಲಿ 3-4 ವರ್ಷ ಬಿಟ್ಟರೆ ಉಳಿದದ್ದು ಎಲ್ಲಾ ವಿರೋಧ ಪಕ್ಷದಲ್ಲೇ(Opposite Parties). ಒಂದು ವೇಳೆ ಕುರಿ, ಕೋಣ ಬಲಿ ಕೊಟ್ಟರೆ ಅಧಿಕಾರ(Authority) ಸಿಗುತ್ತದೆ ಎನ್ನುವುದಾದರೆ ಇಷ್ಟೆಲ್ಲಾ ಕಷ್ಟ ಏನಕ್ಕೆ ಪಡಬೇಕು ಎಂದು ತೀಕ್ಷ್ಣವಾಗಿ(Sharply) ಪ್ರಶ್ನಿಸಿದರು.

Tags: kumaraswamySIT
Previous Post

HD Kumaraswamy on Prajwal Revanna: ಭವಾನಿ ರೇವಣ್ಣನಿಗೂ ಎಸ್​ಐಟಿ ನೋಟಿಸ್ ಕೊಟ್ಟವ್ರೆ ಸರ್?

Next Post

B.Dayanand: ಯಾವುದೇ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಆಚರಿಸುವಂತಿಲ್ಲ

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
Next Post

B.Dayanand: ಯಾವುದೇ ಸಭೆ, ಸಮಾರಂಭ ಮತ್ತು ವಿಜಯೋತ್ಸವ ಆಚರಿಸುವಂತಿಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada