ಮಾಧ್ಯಮಗಳಲ್ಲಿ ಬರುತ್ತಿರುವಂತೆ ನಮ್ಮ ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು. ಸದಾನಂದ ಗೌಡರು ಶಿಸ್ತಿನ ಸಿಪಾಯಿ. ಸಂಘ ಪರಿವಾರದ ಸದಸ್ಯರು. ಅವರು ಕಾಂಗ್ರೆಸ್ ಇಂದ ಆಫ಼ರ್ ಬಂದಿದೆ ಎಂದಷ್ಟೇ ಹೇಳಿದ್ದು. ಆದರೆ ಸೇರುತ್ತೇನೆ ಎಂದು ಹೇಳಲೇ ಇಲ್ಲ. ಇದಕ್ಕೂ ಮೊದಲು ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ, ಮಾಧ್ಯಮದಲ್ಲಿ ಒಂದು ಮಾತು ಹೇಳಿದ್ದರು, ಹಾರಿಕೆ ಸುದ್ದಿ ಹರಡುವವರು ದೇಶದ್ರೋಹಿಗಳು ಎಂದು. ಈಗ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಅಪ್ರಚಾರ ಮಾಡುವವರು ಈಗ ಸಾಲಿಗೆ ಸೇರುವವರು. ಮೋದಿ ಅಲೆಯನ್ನು ನೋಡಿ ಈಗಲೇ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ನಾಯಕರು ಜನರ ಹಾದಿ ತಪ್ಪಿಸಲು ಈ ರೀತಿಯ ಸುಳ್ಳು ಸುದ್ದಿಯನ್ನು ಹಬ್ಬುತ್ತಿದ್ದರೆ. ಸದಾನಂದ ಗೌಡರಂತ ನಿಷ್ಠಾವಂತ ಶಿಸ್ತುಬದ್ದ ಕಾರ್ಯಕರ್ತ ಬಿಜೆಪಿ ಯಲ್ಲಿ ಯಾರು ಇಲ್ಲ. ಇವರೊಬ್ಬ ಸ್ಥಿತಪ್ರಜ್ಞ ರಾಜಕಾರಣಿ ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಸೇರಲಾರರು.
