ಹುಬ್ಬಳ್ಳಿ ಧಾರವಾಡ ಕೋಮು ಸೂಕ್ಷ್ಮ ಪ್ರದೇಶವಾಗಿ ಬದಲಾಗುತ್ತಿದೆ. ನೇಹಾ ಹಿರೇಮಠ ಕೊಲೆಯನ್ನು ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವ ಫಯಾಜ್ ಮಾಡಿದ ಬಳಿಕ ಮತ್ತೋರ್ವ ಅಪ್ರಾಪ್ತ ಹಿಂದೂ ಬಾಲಕಿಯನ್ನು ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕ ಗರ್ಭಿಣಿ ಮಾಡಿರುವ ಘಟನೆ ನಡೆದಿದೆ. ಆದರೆ ಇದನ್ನು ಲವ್ ಜಿಹಾದ್ ಅಲ್ಲ ಎಂದು ರಾಜ್ಯದ ಗೃಹ ಸಚಿವ ಡಾ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದಿರುವುದು ಲವ್ ಜಿಹಾದ್ ಎಂದು ವಿವಿಧ ಹಿಂದೂಪರ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ನೀಚನನ್ನು ಗುಂಡಿಟ್ಟು ಕೊಲ್ಲುವಂತೆ ಆಗ್ರಹ ಕೇಳಿ ಬಂದಿತ್ತು. ಈ ನಡುವೆ ಆರೋಪಿ ಸದ್ದಾಂ ಹುಸೇನ್ ಮೇಲೆ ಪೊಲೀಸ್ರು ಗುಂಡು ಹಾರಿಸಿದ್ದಾರೆ. ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಈ ಘಟನೆ ನಡೆದಿದೆ.

ಆರೋಪಿ ಸದ್ದಾಂ ಹುಸೇನ್ನನ್ನು ಠಾಣೆಯಿಂದ ಧಾರವಾಡಕ್ಕೆ ಸ್ಥಳಾಂತರ ಮಾಡುವಾಗ ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದ್ದು, ಈ ವೇಳೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಇದೀಗ ಆರೋಪಿಯನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಂಡು ತಾಗಿದ ಕಾಲಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಧಾರವಾಡ ವಿದ್ಯಾಗಿರಿ ಠಾಣೆಯ ಸಿಪಿಐ ಸಂಗಮೇಶ್ ಗುಂಡು ಹಾರಿಸಿದ್ದಾರೆ. ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.