ಸಾಲಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಹಾಸನದಿಂದ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಅವರು ಮರಣ ಹೊಂದಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಾರೆ.
ಈ ಕುರಿತು ಸಾಲುಮರದ ತಿಮ್ಮಕ್ಕ ಅವರ ದತ್ತು ಮಗ ಉಮೇಶ್ ಅಮ್ಮನ ಬಗ್ಗೆ ವಿಡಿಯೋ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನಲ್ಲಿ ಸಾಲುಮರದ ತಿಮ್ಮಕ್ಕ ವಾಸಾಗಿದ್ದಾರೆ. ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ವಾತಾವರಣ ಬದಲಾವಣೆಯಿಂದ ಉಸಿರಾಟ ಸಮಸ್ಯೆ ಉಂಟಾಗಿತ್ತು. ಮಂಗಳವಾರ ಮಧ್ಯಾಹ್ನ ಸಮಸ್ಯೆ ಹೆಚ್ಚಾಗುತ್ತಿದ್ದಂತೆ ಅವರನ್ನು ಬಳ್ಳೂರು ಮನೆಯಿಂದ ಆಂಬ್ಯುಲೆನ್ಸ್‌ನಲ್ಲಿ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸಾಲುಮರದ ತಿಮ್ಮಕ್ಕ ಅವರು ತಮ್ಮ ಬೆಂಗಳೂರಿನ ಮಂಜುನಾಥ ನಗರದಲ್ಲಿರುವ ನಿವಾಸದಲ್ಲಿ ಎರಡು ತಿಂಗಳ ಹಿಂದೆ ಕಾಲು ಜಾರಿ ಬಿದ್ದಿದ್ದರು. ಆ ಸಂದರ್ಭದಲ್ಲಿ ಬೆನ್ನು ಮೂಳೆಗೆ ಪೆಟ್ಟಾಗಿತ್ತು. ಆ ಸಂದರ್ಭದಲ್ಲಿ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಆಗಾಗ ಅನಾರೋಗ್ಯ ಮುಂದುವರೆದಿತ್ತು.



