• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರಂಭವಾಯಿತು ಸಮರ್ಜಿತ್ ಲಂಕೇಶ್ ನಾಯಕತ್ವದ ʼಗೌರಿʼ ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
September 3, 2023
in Top Story, ಸಿನಿಮಾ
0
ಗೌರಿ

ಗೌರಿ ಚಿತ್ರತಂಡ

Share on WhatsAppShare on FacebookShare on Telegram

ಹಿರಿಯ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ, ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕರಾಗಿ ನಟಿಸುತ್ತಿರುವ ʼಗೌರಿʼ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಈ ಚಿತ್ರದ ಮೂಲಕ ಸಮರ್ಜಿತ್ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

ADVERTISEMENT

ಬಸವನಗುಡಿ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನೆರವೇರಿತು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.

ಗೌರಿ
ಗೌರಿ ಚಿತ್ರತಂಡ

ಈ ಚಿತ್ರದ ಕುರಿತು ಮಾತನಾಡುವ ಇಂದ್ರಜಿತ್ ಲಂಕೇಶ್, ʼಗೌರಿʼ ಶೀರ್ಷಿಕೆ ಇಡಲು ಕಾರಣವಿದೆ. ನಮ್ಮ ಅಕ್ಕನ ನೆನಪಿನಲ್ಲಿ ಈ ಶೀರ್ಷಿಕೆಯಿಟ್ಟಿದ್ದೇನೆ. ಈ ಚಿತ್ರ ಯುವಕರಿಗೊಂದು ಸ್ಫೂರ್ತಿದಾಯಕ ಸಿನಿಮಾ ಆಗುವುದಂತು ನಿಜ. ಚಿತ್ರದಲ್ಲೊಂದು ಅದ್ಭುತವಾದ ಸಂದೇಶವಿದೆ. ಏನೇ ಹೆಚ್ಚು ಹೇಳಿದರೂ ಈ ಚಿತ್ರದ ಕಥೆ ಏನಿರಬಹುದು? ಎಂಬುದು ಎಲ್ಲರಿಗೂ ತಿಳಿಯುತ್ತದೆ. ಇದು ನಮ್ಮ ರಾಜ್ಯದ ಕಥೆ. ಇಡೀ ದೇಶಕ್ಕೇ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ. ಇದೊಂದು ನೈಜ ಘಟನೆಯನ್ನಾಧರಿಸಿದ ಚಿತ್ರ. ಚಿತ್ರದಲ್ಲಿ ಬಹುದೊಡ್ಡ ತಾರಾಗಣವಿದೆ. ಮುಂದಿನ ದಿನಗಳಲ್ಲಿ ಒಂದೊಂದೇ ವಿಷಯಗಳನ್ನು ಹಂಚಿಕೊಳ್ಳುತ್ತಾ ಹೋಗುತ್ತೇ ಎನ್ನುತ್ತಾರೆ ಇಂದ್ರಜಿತ್.

ಗೌರಿ
ಗೌರಿ ಚಿತ್ರದ ನಾಯಕ, ನಾಯಕಿ

‘ಗೌರಿ’ ಚಿತ್ರದಲ್ಲಿ ನಾಯಕ ಸಮರ್ಜಿತ್ ಲಂಕೇಶ್ ಮತ್ತು ನಾಯಕಿ ಸಾನಿಯಾ ಅಯ್ಯರ್ ಸಹ ಈ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಸಂತಸಪಟ್ಟರು. ‘ಕಾಂತಾರ’ ಚಿತ್ರದ ಖ್ಯಾತಿಯ ಮಾನಸಿ ಸುಧೀರ್ ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದ್ರಜಿತ್ ಅವರ ಪತ್ನಿ ಅರ್ಪಿತಾ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಮತ್ತು ಚಂದನ್ ಶೆಟ್ಟಿ ಸಂಗೀತ ಸಂಯೋಜಿಸುತ್ತಿದ್ದಾರೆ. ಎ.ಜೆ. ಶೆಟ್ಟಿ ಅವರ ಛಾಯಾಗ್ರಹಣವಿದ್ದು, ಮಾಸ್ತಿ ಮಂಜು ಮತ್ತು ಬಿ.ಎ. ಮಧು ಸಂಭಾಷಣೆ ಬರೆಯುತ್ತಿದ್ದಾರೆ..

‘ಗೌರಿ’ ಚಿತ್ರವನ್ನು 2024 ರ ಮಾರ್ಚ್ ನಲ್ಲಿ ತೆರೆಗೆ ತರುವ ಯೋಜನೆ ಹಾಕಿಕೊಂಡಿದ್ದಾರೆ ಇಂದ್ರಜಿತ್ ಲಂಕೇಶ್.

ಈ ಸಂದರ್ಭದಲ್ಲಿ ಸಂಭಾಷಣೆಕಾರರಾದ ಬಿ.ಎ. ಮಧು ಮತ್ತು ಮಾಸ್ತಿ ಮಂಜು, ಗೀತರಚನೆಕಾರ ಕವಿರಾಜ್, ಆನಂದ್ ಆಡಿಯೋ ಶ್ಯಾಮ್, ಹಿರಿಯ ನಿರ್ಮಾಪಕ ಕೆ. ಮಂಜು ಮುಂತಾದವರು ಹಾಜರಿದ್ದು ‘ಗೌರಿ’ ಚಿತ್ರತಂಡಕ್ಕೆ ಶುಭಕೋರಿದರು.

Tags: gowriIndrajith LankeshP Lankeshಇಂದ್ರಜಿತ್‌ ಲಂಕೇಶ್ಗೌರಿಪಿ.ಲಂಕೇಶ್‌
Previous Post

14 ದಿನಗಳ ಕಾಲ ನಿದ್ರೆಗೆ ಜಾರಲಿವೆ ಪ್ರಗ್ಯಾನ್‌ ರೋವರ್‌ ಮತ್ತು ವಿಕ್ರಮ ಲ್ಯಾಂಡರ್..! ಚಂದ್ರಯಾನ-3ರ ಮುಂದಿನ ನಡೆ ಬಗ್ಗೆ ಇಲ್ಲಿದೆ ಮಾಹಿತಿ

Next Post

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯ | ಆಸ್ಪತ್ರೆಗೆ ದಾಖಲು

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಸೋನಿಯಾ ಗಾಂಧಿ

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯ | ಆಸ್ಪತ್ರೆಗೆ ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada