ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjuna kharge) ಅವರನ್ನು ಸಚಿವ ಜಮೀರ್ ಅಹ್ಮದ್ ಖಾನ್ (Zameer Ahamed khan) ಭೇಟಿ ಮಾಡಿದ್ದಾರೆ. ಆ ಮೂಲಕ ಸಿಎಂ ಆಪ್ತರಿಂದ ಎಐಸಿಸಿ ನಾಯಕರ ಭೇಟಿ ಮುಂದುವರೆದಿದೆ.

ಇಂದು ಸಚಿವ ಜಮೀರ್ ಅಹ್ಮದ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದ ಎಐಸಿಸಿ ಅಧ್ಯಕ್ಷರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷರ ಜೊತೆಗೆ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಒಬ್ಬೊಬ್ಬರಾಗಿಯೇ ಸಿಎಂ ಆಪ್ತ ಸಚಿವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯರನ್ನ ಭೇಟಿ ಮಾಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಮುಂಚೆ ಸಚಿವ ಸತೀಶ್ ಜಾರಕಿಹೊಳಿ, ಕೆಎನ್ ರಾಜಣ್ಣ, ಪರಮೇಶ್ವರ ಭೇಟಿ ಮಾಡಿದ್ದು, ಆ ಬಳಿಕ ಈಗ ಜಮೀರ್ ಅಹ್ಮದ್ ಭೇಟಿಯಾಗಿದ್ದು, ಈ ಬೆಳವಣಿಗೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.