• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

‘ಜಟ್ಟ’ ಖ್ಯಾತಿಯ ನಿರ್ದೇಶಕ ಗಿರಿರಾಜ್ ಹೊಸ ಸಿನಿಮಾ ‘ರಾಮರಸ’ .. ನಟ ಧ್ರುವ ಸರ್ಜಾ ಶುಭಹಾರೈಕೆ

ಪ್ರತಿಧ್ವನಿ by ಪ್ರತಿಧ್ವನಿ
April 19, 2024
in ಕರ್ನಾಟಕ, ಸಿನಿಮಾ
0
‘ಜಟ್ಟ’ ಖ್ಯಾತಿಯ ನಿರ್ದೇಶಕ ಗಿರಿರಾಜ್ ಹೊಸ ಸಿನಿಮಾ ‘ರಾಮರಸ’ .. ನಟ ಧ್ರುವ ಸರ್ಜಾ ಶುಭಹಾರೈಕೆ
Share on WhatsAppShare on FacebookShare on Telegram

*ರಾಮನವಮಿ ಮಾರನೇ ದಿನ “ರಾಮರಸ” ಕೊಟ್ಟರು ಗುರು ದೇಶಪಾಂಡೆ .

ADVERTISEMENT

ಬಿ.ಎಂ ಗಿರಿರಾಜ್ ನಿರ್ದೇಶನದ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭ ಹಾರೈಸಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ .

ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 4” ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಕೆಲವು ದಿನಗಳ ಹಿಂದೆ ನೆರವೇರಿತ್ತು. ಈಗ ಆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಚಿತ್ರಕ್ಕೆ “ರಾಮರಸ” ಎಂದು ನಾಮಕರಣ ಮಾಡಲಾಗಿದೆ. “ಜಟ್ಟ”, ” ಮೈತ್ರಿ ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು.

ಶ್ರೀರಾಮನವಮಿಯ ದಿವಸದಂದೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ನಡೆಯಬೇಕಿತ್ತು. ಆದರೆ ಕಾರಣಾಂತರದಿಂದ ಮಾರನೇ ದಿನ ಬಿಡುಗಡೆಯಾಗುತ್ತಿದೆ. “ರಾಮರಸ” ಟೈಟಲ್ ಚೆನ್ನಾಗಿದೆ. ಮೋಷನ್ ಪೋಸ್ಟರ್ ಕೂಡ ಅದ್ಭುತವಾಗಿದೆ. ಗುರು ದೇಶಪಾಂಡೆ ಅವರು ನಮ್ಮ ಅಣ್ಣನ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ನೂತನ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ‌ .ನನ್ನ ಸ್ನೇಹಿತ ಕೂಡ ಈ ಚಿತ್ರದಲ್ಲಿ ನಟಸುತ್ತಿದ್ದಾನೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಧ್ರುವ ಸರ್ಜಾ ಹಾರೈಸಿದರು.

“ರಾಮರಸ” , ಹಾರಾರ್ ಕಾಮಿಡಿ ಜಾನರ್ ನ ಚಿತ್ರ. ಜಿ ಅಕಾಡೆಮಿಯ ಹದಿನಾರು ಜನ ಹೊಸ ಪ್ರತಿಭೆಗಳಿಗೆ ತರಭೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್ ರೆಕಾರ್ಡಿಂಗ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಇಂದು ಧ್ರುವ ಸರ್ಜಾ ಅವರಿಂದ ಶೀರ್ಷಿಕೆ ಅನಾವರಣವನ್ನು ಮಾಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಂಗ್ ರೆಕಾರ್ಡಿಂಗ್ ಪೂಜೆ ಮಾಡುವುದು ವಿರಳ. ಹಳೆಯ ಸಂಪ್ರದಾಯಗಳನ್ನು ಪುನಃ ಗುರು ದೇಶಪಾಂಡೆ ಅವರು ಚಿತ್ರರಂಗಕ್ಕೆ ತರುತ್ತಿದ್ದಾರೆ ಎಂದು ನಿರ್ದೇಶಕ ಬಿ.ಎಂ.ಗಿರಿರಾಜ್ ತಿಳಿಸಿದರು.

2008 ರಲ್ಲಿ ಮೊದಲ ನಿರ್ದೇಶನದೊಂದಿಗೆ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದೆ. ಅಂದಿನಿಂದ ನನ್ನ ಹೆಚ್ಚು ಚಿತ್ರಗಳಲ್ಲಿ‌ ಹೊಸ ಕಲಾವಿದರಿಗೆ ಅವಕಾಶ ಕೊಡುತ್ತಾ ಬಂದಿದ್ದೇನೆ. ಇದು ನಮ್ಮ‌ ಜಿ ಸಿನಿಮಾಸ್ ಲಾಂಛನದಲ್ಲಿ ನಾನು ನಿರ್ಮಾಣ ಮಾಡುತ್ತಿರುವ ನಾಲ್ಕನೇ ಸಿನಿಮಾ.‌ ಈ ಚಿತ್ರದಲ್ಲೂ ಜಿ ಅಕಾಡೆಮಿಯ ಹದಿನಾರು ಜನ ನೂತನ ಪ್ರತಿಭೆಗಳು ಅಭಿನಯಿಸುತ್ತಿದ್ದಾರೆ. ಅವರಿಗೆ ಅಭಿನಯಕ್ಕೆ ಬೇಕಾದ ವರ್ಕ್ ಶಾಪ್ ನಡೆಸಲಾಗಿದೆ. ಇವರೊಂದಿಗೆ ಕನ್ನಡದ ಖ್ಯಾತ ನಟರೊಬ್ಬರು ನಟಿಸುತ್ತಿದ್ದು, .ಮಾತುಕತೆ ಅಂತಿಮ ಹಂತದಲ್ಲಿದೆ. ಮೇ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಂ.ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅವರ ಹಿಂದಿನ ಚಿತ್ರಗಳು ನನಗೆ ಬಹಳ ಇಷ್ಟವಾಗಿದ್ದವು. ಕನ್ನಡದಲ್ಲಷ್ಟೇ ಕಮರ್ಷಿಯಲ್, ಆರ್ಟ್ ಅಂತ ವಿಭಾಗಗಳಿದೆ. ಆದರೆ ಬೇರೆ ಭಾಷೆಗಳಲ್ಲಿ ಆ ಚಿತ್ರ ಪ್ರಶಸ್ತಿ ಪಡೆದುಕೊಂಡಿರುತ್ತದೆ ಹಾಗೂ ಗಳಿಕೆಯಲ್ಲೂ ಮುಂದಿರುತ್ತದೆ. ಈ ಚಿತ್ರ ಕೂಡ ಅಂತಹ ಚಿತ್ರವಾಗಬೇಕೆಂದು ನನ್ನ ಆಸೆ. ಬಿ.ಜೆ.ಭರತ್ ಈಗಾಗಲೇ “ರಾಮರಸ” ದ ಎರಡು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್ ಆರ್ಯ ಹಾಡುಗಳನ್ನು ಬರೆದಿದ್ದಾರೆ. ಸುನೀಲ್ ಹೆಚ್ ಸಿ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ‌ ನಿರ್ವಹಿಸುತ್ತಿದ್ದಾರೆ‌. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ಮಾಪಕ ಗುರು ದೇಶಪಾಂಡೆ.

ಜಿ ಅಕಾಡೆಮಿಯಲ್ಲಿ ಅಭಿನಯ ಕಲಿತಿರುವ ಹದಿನಾರು ನೂತನ ಪ್ರತಿಭೆಗಳು ಹಾಗೂ ಸಹ ನಿರ್ದೇಶಕರಾಗಿ ಕಾರ್ಯ ನಿರವಹಿಸಲಿರುವ ಮೂವರು ನವ ಸಹ ನಿರ್ದೇಶಕರು ಹಾಗೂ ನೂತನ ಸಹ ನಿರ್ಮಾಪಕರೊಬ್ಬರು ತಮ್ಮ ಪರಿಚಯ ಮಾಡಿಕೊಂಡರು. ಸಂಗೀತ ನಿರ್ದೇಶಕ ಬಿ.ಜೆ.ಭರತ್. ಗೀತರಚನೆಕಾರ ಪುನೀತ್ ಆರ್ಯ, ಕಾರ್ಯಕಾರಿ ನಿರ್ಮಾಪಕ ಸುನೀಲ್ ಹೆಚ್ ಸಿ ಗೌಡ ಹಾಗೂ ವಿತರಕ ವೆಂಕಟ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Previous Post

ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಕೇಸ್ ! ಘಟನೆ ಖಂಡಿಸಿದ ವಿನೋದ್‌ ಅಸೂಟಿ ! 

Next Post

ಮೈತ್ರಿ ಸವಾಲನ್ನೂ ಮೆಟ್ಟಿ ನಿಲ್ತಾರಾ ಡಿಕೆ ಸುರೇಶ್ ? ಅಭಿವೃದ್ಧಿಯೇ ಸಂಸದರ ಕೈಹಿಡಿಯಲಿದೆ ಎಂದ ಮತದಾರ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಬೆಂ.ಗ್ರಾ ಗೆಲ್ಲಲು ‘ಅಷ್ಟಪಾಲಕರ’ ನೇಮಕ.. ಡಿಕೆ ಬ್ರದರ್ಸ್ ತಂತ್ರಕ್ಕೆ ‘ಕೇಸರಿ’ ಪ್ರತಿತಂತ್ರ.. ಡಾ.ಮಂಜುನಾಥ್ ಜಯಕ್ಕೆ ವೋಟ್ ‘ಲೆಕ್ಕಾ’ಚಾರ ..!

ಮೈತ್ರಿ ಸವಾಲನ್ನೂ ಮೆಟ್ಟಿ ನಿಲ್ತಾರಾ ಡಿಕೆ ಸುರೇಶ್ ? ಅಭಿವೃದ್ಧಿಯೇ ಸಂಸದರ ಕೈಹಿಡಿಯಲಿದೆ ಎಂದ ಮತದಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada