ಮೈಸೂರು ದಸರಾ 2024ರ (Mysuru dasara 2024) ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷ ಅರಮನೆ ಆವರಣದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ & ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ವಾಡಿಕೆ.
ಹೀಗಾಗಿ ಪ್ರತಿ ವರ್ಷದಂತೆ ಈ ಬಾರಿ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ (Pandit Basavaraj bhajantri) ಅವರನ್ನು ಆಯ್ಕೆ ಮಾಡಲಾಗಿದೆ.
ಪಂಡಿತ್ ಎಂ . ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಇವರ ಹೆಸರನ್ನು ಅಂತಿಮಗೊಳಿಸಿದೆ. ಅಕ್ಟೋಬರ್ 3ರಂದು ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cm siddaramaiah) ಈ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ.