ಪತ್ರಾಚಲ್ ಭೂ ಹಗರಣ, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಶಿವಸೇನೆ ನಾಯಕ ಸಂಜಯ್ ರಾವುತ್ ನ್ಯಾಯಾಂಗ ಬಂಧನ ಅವಧಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ವಿಸ್ತರಿಸಿದೆ.
ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಾದ-ಪ್ರತಿವಾದವನ್ನ ಸುಧೀರ್ಘವಾಗಿ ಆಲಿಸಿದ ನಂತರ ಆಗಸ್ಟ್ 22ರವರೆಗೂ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.