ಕೊಲ್ಕತ್ತಾದಲ್ಲಿ (Kolkata) ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದಆರೋಪಿ ಸಂಜಯ್ ರಾಯ್ (Sanjay Rao) ಈ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ತೀರ್ಪು ಪ್ರಕಟವಾಗಿದೆ. ಆರೋಪಿ ಸಂಜಯ್ ರಾಯ್ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇವತ್ತು ಸಿಲ್ಡಾ ಸೆಷನ್ಸ್ ನ್ಯಾಯಾಲಯದಿಂದ ಈ ಆದೇಶ ಪ್ರಕಟವಾಗಿದೆ.
2024ರ ಆಗಸ್ಟ್ 9ರಂದು ಆರ್ಜಿ ಕರ್ ಆಸ್ಪತ್ರೆಯಲ್ಲಿ ಅರೆ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಈ ಪ್ರಕರಣ ಇಡೀ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.