ಉಪನಾಯಕ ಕೆಎಲ್ ರಾಹುಲ್ ಬದಲು ಸಂಜು ಸ್ಯಾಮ್ಸನ್ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ಆಯ್ಕೆ ಮಾಡಲಾಗಿದೆ.
ಗಾಯದಿಂದ ಚೇತರಿಸಿಕೊಂಡ ನಂತರ ಕೊರೊನಾ ವೈರಸ್ ನಿಂದ ಬಳಲುತ್ತಿದ್ದ ಕೆಎಲ್ ರಾಹುಲ್ ಸರಣಿಗೂ ಮುನ್ನ ಫಿಟ್ ಆಗದ ಹಿನ್ನೆಲೆಯಲ್ಲಿ ಟಿ-20 ಸರಣಿಯಿಂದ ಹೊರಬಿದ್ದಿದ್ದರು. ಇದೀಗ ಅವರ ಸ್ಥಾನಕ್ಕೆ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಟಿ-20 ಸರಣಿಗೆ ಪರಿಗಣಿಸಲಾಗಿದೆ ಎಂದು ಬಿಸಿಸಿಐ ಆಯ್ಕೆ ಸಮಿತಿ ತಿಳಿಸಿದೆ.