ಭ್ರಷ್ಟಾಚಾರ ನಿಗ್ರಹ ದಳ(ACB)ಯನ್ನು ರದ್ದುಗೊಳಿಸಿ ಅದರ ಅಡಿಯಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಗೆ ವರ್ಗಾಯಿಸಬೇಕೆಂದು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಸ್ವಾಗತಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಲೋಕಾಯುಕ್ತರ ಅಧಿಕಾರವನ್ನ ಪುನರ್ ಸ್ಥಾಪಿಸಬೇಕೆಂದು ಒತ್ತಿ ಹೇಳಿದ್ದಾರೆ.

ಇದು ಒಂದು ಅತ್ಯುತ್ತಮವಾದ ತೀರ್ಪು ಸರ್ಕಾರ ಉತ್ತಮವಾಗಿ ಸ್ಪಂದಿಸಿದರೆ ಭ್ರಷ್ಟಾಚಾರವನ್ನ ಮಟ್ಟ ಹಾಕುವಲ್ಲಿ ಒಂದು ದೊಡ್ಡ ಹೆಜ್ಜೆ ಇಡಬಹುದು. ಯಾವುದೇ ಪ್ರಾಮಾಣಿಕ ಸರ್ಕಾರ ತೀರ್ಪನ್ನು ಒಪ್ಪಿಕೊಳ್ಳಬೇಕು ಮತ್ತು ಅಗತ್ಯ ಮಾನವಸಂಪನ್ಮೂಲವನ್ನು ಒದಗಿಸುವ ಮೂಲಕ ಲೋಕಾಯುಕ್ತವನ್ನ ಬಲಗೊಳಿಸಬೇಕು ಎಂದಿದ್ದಾರೆ.
ಸಾರ್ವಜನಿಕರ ಸೇವೆಯಲ್ಲಿರುವವರ ಭ್ರಷ್ಟಾಚಾರದ ತನಿಖೆಗೆ ಲೋಕಾಯುಕ್ತ ಮುಂದಾಗಿತ್ತು ಹೀಗಾಗಿ ಅದನ್ನು ದುರ್ಬಲಗೊಳಿಸಲು ರಾಜಕಾರಣಿಗಳು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.