ಧಾರವಾಡ, ಫೆ. 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santhosh Lad) ಅವರು, ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು (Disability Students) ಅತ್ಯಂತ ದೃಢನಿಶ್ಚಯದ ಮಕ್ಕಳು. ತುಂಬಾ ಬುದ್ಧಿವಂತರು ಇರುತ್ತಾರೆ. ಅವರಿಗೆ ಸರಿಯಾದ ಆರೈಕೆ, ಚಿಕಿತ್ಸೆ, ಮೂಲಸೌಕರ್ಯದ ಅಗತ್ಯವಿವೆ. ಸರ್ಕಾರವು ವಿಶೇಷಚೇತನ ಮಕ್ಕಳ ಆರೈಕೆಗೆ ಅಗತ್ಯ ನೆರವು ಮತ್ತು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ಸಚಿವ ಲಾಡ್ (Santhosh Lad) ಅವರು, ವಿಶೇಷ ಚೇತನ ಶಾಲೆಯ ಶಿಕ್ಷಕರನ್ನು(Teachers), ವೈದ್ಯರನ್ನು(Doctors), ಮುಖ್ಯಸ್ಥರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ(Dc Divya Prabhu GRJ), ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ(SP N Shashikumar) ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೊಡ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಗಾಳಿ(Rudresh Gali), ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ(Ramakrishna Sadalagi), ಜನಮುಖಿ ಸೇವಾ ಸಂಸ್ಥೆ ಮುಖ್ಯಸ್ಥ ಬಸವರಾಜ ಮ್ಯಾಗೇರಿ(Basavaraj Myageri), ವಿದ್ಯಾ ಮ್ಯಾಗೇರಿ (Vidya Myageri)ಸೇರಿದಂತೆ ಇತರರು ಇದ್ದರು.
