ಧಾರವಾಡ, ಏಪ್ರಿಲ್ ೬: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಇಂದು ಪ್ರಚಾರದಲ್ಲಿ ಭಾಗಿಯಾಗಿದ್ದರು.

*ಕನ್ನಡಪರ ಸಂಘಟನೆಗಳ ಮುಖಂಡರ ಭೇಟಿ*
ಹುಬ್ಬಳ್ಳಿ – ಧಾರವಾಡ ಭಾಗದ ಕನ್ನಡಪರ ಸಂಘಟನೆಗಳ ಮುಖಂಡರನ್ನು ಭೇಟಿ ಮಾಡಿದ ಸಚಿವ ಲಾಡ್ ಅವರು ಬಾರಿಯ ಚುನಾವಣೆಯಲ್ಲಿ ವಿನೋದ್ ಅಸೂಟಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಈ ವೇಳೆ ಪಕ್ಷದ ಮುಖಂಡರಾದ ಅನಿಲ್ ಕುಮಾರ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

*ರೈತ ಮುಖಂಡರ ಬೃಹತ್ ಸಭೆ*
ಧಾರವಾಡ ಜಿಲ್ಲಾ ರೈತ ಮುಖಂಡರ ಬೃಹತ್ ಸಭೆ ನಡೆಸಿದ ಲಾಡ್ ಅವರು ಈ ಬಾರಿಯ ಚುನಾವಣೆಯಲ್ಲಿ ಅಸೂಟಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ರೈತರ ಕಲ್ಯಾಣಕ್ಕೆ ಕಾಂಗ್ರಸ್ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದು, ಅನ್ನದಾತರು ನಮ್ಮ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ಹೇಳಿದರು.
ಈ ವೇಳೆ ಪಕ್ಷದ ಅಭ್ಯರ್ಥಿ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.
*ಛಬ್ಬಿ ಬ್ಲಾಕ್ ವ್ಯಾಪ್ತಿಯಲ್ಲಿ ಚುನಾವಣಾ ಸಭೆ*
ಕುಂದಗೋಳ ವಿಧಾನಸಭಾ ಕ್ಷೇತ್ರದ ಛಬ್ಬಿ ಬ್ಲಾಕ್ ವ್ಯಾಪ್ತಿಯ ಮುಖಂಡರ ಹಾಗೂ ಕಾರ್ಯಕರ್ತರ ಚುನಾವಣಾ ಸಭೆಯಲ್ಲಿ ಭಾಗವಹಿಸಿ ಸಚಿವ ಲಾಡ್ ಅವರು ಭಾಗವಹಿಸಿ ಮಾತನಾಡಿದರು.

ಈ ಸಭೆಯಲ್ಲಿ ಶಾಸಕ ಮಿತ್ರರಾದ ಎನ್ ಎಚ್ ಕೋನರಡ್ಡಿ, ಮುಖಂಡರಾದ ಅನಿಲ್ ಕುಮಾರ್ ಪಾಟೀಲ್, ಪಾಲಿಕೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.ಧಾರವಾಡ, ಏಪ್ರಿಲ್ ೬: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಇಂದು ಪ್ರಚಾರದಲ್ಲಿ ಭಾಗಿಯಾಗಿದ್ದರು.