‘ಕೆಜಿಎಫ್ 2’ ಸಿನಿಮಾದ ನಂತರ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಿಂದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಮೊನ್ನೆಯಷ್ಟೇ ಸಿನಿಮಾವೊಂದು ಅನೌನ್ಸ್ ಆಗಿದ್ದು, ಇಂದು ಮತ್ತೊಂದು ಸಿನಿಮಾ ಘೋಷಣೆಯಾಗಿದೆ.
ಹೌದು, ಇಂದು ಮತ್ತೊಂದು ಸಿನಿಮಾ ಘೋಷಣೆಯಾಗಿದ್ದು, ಹೊಂಬಾಳೆ ಫಿಲ್ಮ್ಸ್ ಸಂತೋಷ್ ಆನಂದ್‌ರಾಮ್ ಹಾಗೂ ಯುವ ರಾಜ್‌ಕುಮಾರ್ ಕಾಂಬಿನೇಶನ್‌ನಲ್ಲಿ ಸಿನಿಮಾ ಮಾಡಲಿದ್ದೇವೆ ಎಂದು ಹೇಳಿಕೊಂಡಿದೆ.

ಈ ಕುರಿತು ಹೊಂಬಾಳೆ ಫಿಲ್ಮ್ಸ್ ತಮ್ಮ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಹೊಂಬಾಳೆ ಸಂಸ್ಥೆಗೂ ಡಾ. ರಾಜ್ ಕುಮಾರ್ ಕುಟುಂಬದ ನಡುವೆ ಇರುವ ಸಂಬಂಧದ ಮುಂದುವರೆದ ಭಾಗವಾಗಿ ನಾವು ನಮ್ಮ ಹೊಂಬಾಳೆ ಫಿಲಂಸ್ ನಲ್ಲಿ ದೊಡ್ಮನೆಯ ಮೂನೇ ತಲೆಮಾರು ಯುವರಾಜ್ ಕುಮಾರ್ ರನ್ನು ನಾಯಕನಟನಾಗಿ ಬೆಳ್ಳಿಪರದೆಗೆ ಪರಿಸಯಿಸಲು ಸಂತೋಷ ಪಡುತಿದ್ದೇವೆ ಎಂದು ಹೇಳಿಕೊಂಡಿದೆ.
ಈ ಹಿಂದೆ ಯುವ ರಾಜ್‌ಕುಮಾರ್ ನಾಯಕರಾಗಿ ‘ಯುವ ರಣಧೀರ ಕಂಠೀರವ’ ಸಿನಿಮಾ ಮೂಲಕ ಲಾಂಚ್ ಆಗಬೇಕಿತ್ತು. ಕಾರಣಾಂತರಗಳಿಂದ ಆ ಸಿನಿಮಾ ಮುಂದಕ್ಕೆ ಹೋಗಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಲ್ಲಿ ಈಗ ಸಂತೋಷ್ ಆನಂದ್‌ರಾಮ್ ಅವರ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.