• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಡ ಕುಟುಂಬಗಳಿಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮನೆಗಳನ್ನು ಹಂಚಿಕೆ ಮಾಡಿದ ಸಂತೋಷ್‌ ಲಾಡ್.‌.!!

ಅಗತ್ಯ ಸಿದ್ಧತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
January 19, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ಬಡ ಕುಟುಂಬಗಳಿಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಮನೆಗಳನ್ನು ಹಂಚಿಕೆ ಮಾಡಿದ ಸಂತೋಷ್‌ ಲಾಡ್.‌.!!
Share on WhatsAppShare on FacebookShare on Telegram

ಸಚಿವ ಜಮೀರ್ ಅಹಮದ್, ಪ್ರಸಾದ್ ಅಬ್ಬಯ್ಯ ಅವರೊಂದಿಗೆ ಸಭೆ
* ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಂದ 2 ಲಕ್ಷ ಫಲಾನುಭವಿಗಳು ಭಾಗಿ ಸಾಧ್ಯತೆ
* ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಶ್ರೀ ಡಿ.ಕೆ. ಶಿವಕುಮಾರ್‌ ಪಾಲ್ಗೊಳ್ಳುವಿಕೆ
* ಜನವರಿ 24, 2026 ರಂದು ಹುಬ್ಬಳ್ಳಿಯಲ್ಲಿ ಮನೆಗಳ ಲೋಕಾರ್ಪಣೆ ಕಾರ್ಯಕ್ರಮ

ADVERTISEMENT

ಬಡ ಮತ್ತು ಮಧ್ಯಮ ವರ್ಗದವರ ಸ್ವಂತ ಮನೆಯ ಕನಸನ್ನು ನನಸಾಗಿಸುವ ಮಹತ್ವದ ಯೋಜನೆಯ ಅಂಗವಾಗಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಕಾರ್ಯಕ್ರಮವನ್ನು ಜನವರಿ 24, 2026 ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಸರ್ಕಾರದ ಜನಪರ ಕಾರ್ಯಗಳಿಗೆ ಪ್ರತೀಕವಾಗಿರುವ ಈ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ. ಜವಾಬ್ದಾರಿ ಹಂಚಿಕೆಯಾಗಿರುವ ಅಧಿಕಾರಿಗಳು ನಿಯಮಾನುಸಾರ ಕಾರ್ಯನಿರ್ವಹಿಸಬೇಕೆಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದ ಸಿದ್ಧತೆಯ ಕುರಿತು ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು.

DGP Obscene Video : ರಾಮಚಂದ್ರ ರಾವ್ ರಾಸಲೀಲೆ ಇಲಾಖೆ ಮಾನ ಹರಾಜು..! #pratidhvani

ಕಾರ್ಯಕ್ರಮದ ಪೂರ್ವಸಿದ್ಧತೆಗಳಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ವೇದಿಕೆ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ಸರಬರಾಜು, ಶೌಚಾಲಯ, ಸಾರಿಗೆ, ಭದ್ರತೆ ಹಾಗೂ ಆರೋಗ್ಯ ಸೇವೆಗಳ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಧಾರವಾಡ ಜಿಲ್ಲೆಯಲ್ಲಿ ಒಟ್ಟು 2,169 ಮನೆಗಳು ಮಂಜೂರು ಮಾಡಲಾಗಿದೆ. ಘೋಷಿತ ಸ್ಲಂಗಳಲ್ಲಿರುವ 1,137 ಕಚ್ಚಾ ಮನೆಗಳನ್ನು ಪಕ್ಕಾ ಮನೆಗಳನ್ನಾಗಿ ಪುನರ್ ನಿರ್ಮಿಸಲಾಗಿದೆ. ಒಟ್ಟು 1,032 ಮನೆಗಳಿರುವ ವಸತಿ ಸಮುಚ್ಚಯ ನಿರ್ಮಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹುಬ್ಬಳ್ಳಿಯಲ್ಲಿ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ 3000 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.

DGP Ramachandra Rao Siddaramaiah : ವೇದಿಕೆ ಮೇಲೆ ರೊಚ್ಚಿಗೆದ್ದ ಸಿಎಂ ಸಿದ್ದರಾಮಯ್ಯ.  #pratidhvani

ಮುಖ್ಯಮಂತ್ರಿಗಳು, ರಾಜ್ಯದ ವಸತಿ ರಹಿತರಿಗೆ ಸೂರು ಕಲ್ಪಿಸಲು ವಸತಿ ಇಲಾಖೆ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದು, ಪ್ರತಿ ಜಿಲ್ಲೆಯಲ್ಲಿ ಹಾಗೂ ತಾಲೂಕುಗಳಲ್ಲಿ ಆದ್ಯತೆ ಮೇರೆಗೆ ವಸತಿರಹಿತರಿಗೆ ವಸತಿ ಕಲ್ಪಿಸಲು ರಾಜ್ಯ ಸರ್ಕಾರವು ಕ್ರಮವಹಿಸಿದೆ ಎಂದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾಗಿರುವ ಮನೆಗಳ ಲೋಕಾರ್ಪಣೆ ಕಾರ್ಯಕ್ರಮವು ಧಾರವಾಡ-ಹುಬ್ಬಳ್ಳಿ ಜಿಲ್ಲೆಯ ಅಭಿವೃದ್ಧಿಗೆ ಮತ್ತೊಂದು ಮೈಲಿಗಲ್ಲಾಗಲಿದೆ. ಸರ್ಕಾರವು ಬಡ ಮತ್ತು ಮಧ್ಯಮ ವರ್ಗದ ಜನರ ವಾಸಸ್ಥಾನದ ಭದ್ರತೆಗೆ ವಿಶೇಷ ಆದ್ಯತೆ ನೀಡಿದ್ದು, ಈ ಯೋಜನೆಯ ಮೂಲಕ ಸಾವಿರಾರು ಕುಟುಂಬಗಳಿಗೆ ಗೌರವಯುತ ಜೀವನದ ಅವಕಾಶ ದೊರಕಿಸಿದೆ ಎಂದು ಅವರು ಹೇಳಿದರು.

Lakshmi Hebbalkar : ನಮ್ಮ ಸರ್ಕಾರ ಇದನ್ನು ಸಹಿಸಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ..!

ಜನವರಿ 24, 2026 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ಶಹರದ ಮಂಟೂರ ರಸ್ತೆ ಪ್ರದೇಶದಲ್ಲಿ ಆಯೋಜಿಸಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ವಸತಿ ರಹಿತ ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲಾಗುತ್ತಿದೆ. ನಾಲ್ಕು ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಫಲಾನುಭವಿಗಳು ಆಗಮಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸುಮಾರು 42,345 ಮನೆಗಳನ್ನು ಏಕಕಾಲದಲ್ಲಿ ರಾಜ್ಯದ 28 ಜಿಲ್ಲೆಗಳಲ್ಲಿನ ವಸತಿ ರಹಿತರಿಗೆ ಸುಸಜ್ಜಿತ ಮನೆಗಳನ್ನು ವಿತರಿಸುವ ಕಾರ್ಯಕ್ರಮವು ಆಯಾ ಜಿಲ್ಲೆಯ ಸಚಿವರ ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಜರುಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್‍ನ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯ ಸಚಿವ ಸಂಪುಟದ ಅನೇಕ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸಿಲಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಅವರು ತಿಳಿಸಿದರು.

Gilli Parents Reaction: 50 ಲಕ್ಷ ಅಂದ್ರೆ ನಮಗೆ ಆನೆ ಸಿಕ್ಕಷ್ಟೇ ಖುಷಿ ಆಗ್ತಿದೆ ಎಂದ ಗಿಲ್ಲಿ ತಂದೆ #pratidhvani

ಕಾರ್ಯಕ್ರಮವು ಯಾವುದೇ ಅಡಚಣೆಗಳಿಲ್ಲದೆ, ಸುವ್ಯವಸ್ಥಿವಾಗಿ ಕ್ರಮವಹಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಮನ್ವಯದಿಂದ ಕೆಲಸ ಮಾಡಬೇಕು. ಈಗಾಗಲೇ ಜವಾಬ್ದಾರಿ ಹಂಚಿಕೆಯಾಗಿರುವ ಅಧಿಕಾರಿಗಳು ಮುತುರ್ವಜಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು‌ ಮಾತನಾಡಿ, ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಒಟ್ಟು 1,80,253 ಮನೆಗಳು ಮಂಜೂರು ಮಾಡಲಾಗಿದೆ. ಅದರಲ್ಲಿ 1,29,986 ಮನೆಗಳ ನಿರ್ಮಾಣ ಪ್ರಾರಂಭವಾಗಿದೆ. ಇದರಲ್ಲಿ 86,651 ಮನೆಗಳ ನಿರ್ಮಾಣ ಕಾರ್ಯವು ಈಗಾಗಲೇ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ 36,789 ಮನೆಗಳು ಉದ್ಘಾಟನೆಯಾಗಿ, ಫಲಾನುಭವಿಗಳಿಗೆ ವಿತರಣೆ ಆಗಿವೆ. ಹಾಗೂ 43,335 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

Siddaramaiah : ಸಾಹುಕಾರ್‌ ಅಂತ ಕೂಗಿದ್ರೂ, ತಿರುಗಿ ನೋಡದ ಸತೀಶ್‌ ಜಾರಕಿಹೊಳಿ  #pratidhvani

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದೊಂದಿಗೆ ಮಂಡಳಿಯು ನಿರ್ಮಿಸುತ್ತಿರುವ 1,80,253 ಮನೆಗಳಲ್ಲಿ 2ನೇ ಹಂತದಲ್ಲಿ ರಾಜ್ಯದ ಒಟ್ಟು 28 ಜಿಲ್ಲೆಯಗಳಲ್ಲಿ 42,345 ಮನೆಗಳ ಈಗ ಉದ್ಘಾಟನೆಯಾಗಲಿವೆ. ಅವುಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ 20,312 ಮನೆಗಳು, ಇತರೆ ವರ್ಗದವರಿಗೆ 22,033 ಮನೆಗಳಿವೆ. ಫಲಾನುಭವಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ವಿಶೇಷ ಗಮನ ಹರಿಸಬೇಕು. ಮನೆಗಳ ಲೋಕಾರ್ಪಣೆ ಕಾರ್ಯಕ್ರಮವು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಲ್ಲ. ಬದಲಾಗಿ ಜನರ ಜೀವನದಲ್ಲಿ ಭದ್ರತೆ ಮತ್ತು ಗೌರವವನ್ನು ನೀಡುವ ಮಹತ್ವದ ಕ್ಷಣವಾಗಿದೆ ಎಂದು ಅವರು ಹೇಳಿದರು.

ವಿಧಾನ ಪರಿಷತ್‌ನಲ್ಲಿನ ಸರ್ಕಾರದ ಮುಖ್ಯ ಸಚೇತಕರಾದ ಸಲಿಂ ಅಹ್ಮದ್, ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ್ ‌ ಶಾಸಕರಾದ ಎನ್.ಎಚ್. ಕೋನರಡ್ಡಿ ಅವರು ಮಾತನಾಡಿದರು.

DK Shivakumar on CM : ಹೈಕಮಾಂಡ್‌ ಹೇಳಿದ್ದನ್ನು ನಾನು ಸಿದ್ದರಾಮಯ್ಯ ಪಾಲಿಸುತ್ತೇವೆ..! #siddaramaiah

ವಿಧಾನ ಪರಿಷತ್‌ ಸದಸ್ಯ ಎಫ್.ಹೆಚ್. ಜಕ್ಕಪ್ಪನವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗುಂಜನ್ ಆರ್ಯ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ, ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಉಪಸ್ಥಿತರಿದ್ದು, ಕಾರ್ಯಕ್ರಮದ ಸಿದ್ಧತೆಗಾಗಿ ಕೈಗೊಂಡ ಕ್ರಮಗಳ ಕುರಿತು ಮಾತನಾಡಿದರು.

Tags: bhuvanesh PatilDK ShivakumarGunjan AryaMallikarjun KhargeN ShashikumarPrasad AbbaiahPriyanga MRudresh GhaliSaleem AhmedSanthosh S LadShivaleela Vinay KulakarnisiddaramaiahZameer Ahmed Khan
Previous Post

ಬಿಹಾರದ ಯುವ ನಾಯಕನಿಗೆ ಕಮಲ ಸಾರಥ್ಯ : ನಿತಿನ್‌ ನಬಿನ್‌ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಪಟ್ಟ..!

Next Post

ಸಂಗೊಳ್ಳಿ ರಾಯಣ್ಣ ವೀರಭೂಮಿ, ಪುತ್ಥಳಿ ಲೋಕಾರ್ಪಣೆ ಇಡೀ ದೇಶವೇ ಮೆಚ್ಚುವಂಥ ಕೆಲಸ..!!

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
ಸಂಗೊಳ್ಳಿ ರಾಯಣ್ಣ ವೀರಭೂಮಿ, ಪುತ್ಥಳಿ ಲೋಕಾರ್ಪಣೆ ಇಡೀ ದೇಶವೇ ಮೆಚ್ಚುವಂಥ ಕೆಲಸ..!!

ಸಂಗೊಳ್ಳಿ ರಾಯಣ್ಣ ವೀರಭೂಮಿ, ಪುತ್ಥಳಿ ಲೋಕಾರ್ಪಣೆ ಇಡೀ ದೇಶವೇ ಮೆಚ್ಚುವಂಥ ಕೆಲಸ..!!

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada