ಮೈಸೂರಿನ ಮುಡಾ ಕೇಸ್ (MUDA) ನಲ್ಲಿ ಸಿಎಂ ಸಿದ್ದರಾಮಯ್ಯ ಗೆ (Cm siddaramaiah) ಲೋಕಾಯುಕ್ತದಿಂದ (Lokayukta) ಕ್ಲೀನ್ ಚಿಟ್ ಸಿಕ್ಕಿರುವ ಹಿನ್ನಲೆ ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad) ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಸಂತೋಷ ಲಾಡ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುಟುಂಬದ ಮೇಲೆ ಸುಳ್ಳು ಆರೋಪ ಮಾಡಲಾಗಿತ್ತು.ಹೀಗಾಗಿ ಲೋಕಾಯುಕ್ತದಿಂದ ಕ್ಲೀನ್ ಚಿಟ್ ಸಿಕ್ಕಿದೆ ಎಂದಿದ್ದಾರೆ.

ಬಿಜೆಪಿಯವರು ಸಿಎಂಗೆ ಕಪ್ಪು ಚುಕ್ಕೆ ಇಡುವ ಪ್ರಯತ್ನ ಮಾಡಿದರು.ಆದರೆ ಅದು ಈಗ ವಿಫಲವಾಗಿದೆ. ಬಿಜೆಪಿ ಕಾಲದಲ್ಲಿ ಸಾಕಷ್ಟು ಹಗರಣಗಳಾಗಿವೆ. ಇವತ್ತಿನವರೆಗೂ ಯಾವ ಕೇಸ್ ಸಿಬಿಐಗೆ ನೀಡಿದ್ದಾರೆ..? ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ರು.