ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಸಿರುವ ಪಿಂಪ್ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಸಮ್ಮುಖದಲ್ಲಿ ಸಂತ್ರಸ್ತೆಯ ವಿಚಾರಣೆ ನಡೆದಿದೆ.
ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದವಿಚಾರಣೆಗೆ ಸಂತ್ರಸ್ತ ಮಹಿಳೆ, ಆಕೆಯ ಸಹೋದರಿ, ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ, ಪರಶುರಾಮ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಕಮಿಷನರ್ ರಮೇಶ್ ಬಾನೋತ್, ಡಿಸಿಪಿಗಳಾದ ಮುತ್ತುರಾಜ್, ಗೀತಾ ಪ್ರಸನ್ನ ಸೇರಿದಂತೆ ಪ್ರಮುಖರು ಸಂತ್ರಸ್ತ ಮಹಿಳೆಯ ವಿಚಾರಣೆ ನಡೆಸುತ್ತಿದ್ದಾರೆ.