ಜನಪ್ರಿಯ ಟಿವಿ ಶೋ ಸಾರಾಭಾಯ್ ವರ್ಸಸ್ ಸಾರಾಭಾಯ್ ಪಾತ್ರದ ಮೂಲಕ ಖ್ಯಾತಿ ಗಳಿಸಿದ್ದ ನಟಿ ವೈಭವಿ ಉಪಾಧ್ಯಾಯ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಈ ವಿಚಾರವನ್ನು ನಿರ್ಮಾಪಕ ಜೆಡಿ ಮಜೇಥಿಯಾ ಹಂಚಿಕೊಂಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು 32 ವರ್ಷದ ನಟಿ ವೈಭವಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇಂದು ಬೆಳಗ್ಗೆ ಮುಂಬೈನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ನಟಿ ವೈಭವಿ ಉಪಾಧ್ಯಾಯ ಅಂತ್ಯಕ್ರಿಯೆ ನೆರವೇರಲಿದೆ.