ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಭೀಕರವಾಗಿ ಹತ್ಯೆಗೈದ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಘಟನೆ ನಡೆದ 4 ಗಂಟೆಯಲ್ಲೇ ಬಂಧಿಸಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಮಧ್ಯಾಹ್ನ 12.30ರ ಸುಮಾರಿಗೆ ಇಬ್ಬರು ಹಂತಕರು ಚಾಕುವಿನಿಂದ ಇರಿದು ಪರಾರಿಯಾಗಿದ್ದರು.
ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಆರೋಪಿಗಳ ಪತ್ತೆಗೆ 5 ತಂಡ ರಚಿಸಲಾಗಿದ್ದು, ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಹುಬ್ಬಳ್ಳಿ- ಬೆಳಗಾವಿ ಮಧ್ಯೆ ಇದ್ದ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಂದ್ರಶೇಖರ್ ಅವರ ಆಪ್ತರು ಎನ್ನಲಾದ ಮಹಂತೇಶ್ ಶಿರೂರು ಮತ್ತು ಮಂಜುನಾಥ್ ಎಂಬುವವರು ಕೊಲೆ ಮಾಡಿ ಪರಾರಿಯಾಗಿದ್ದರು.