ಬೆಳಗಾವಿ : ರಾಜ್ಯದಲ್ಲಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜೆಡಿಎಸ್ ಜೊತೆ ಚುನಾವಣಾತ್ತೋರ ಮೈತ್ರಿಯ ಸುಳಿವು ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಹೆಚ್ಡಿ ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಸರ್ಕಾರ ರಚನೆ ಮಾಡಲು ಉತ್ಸುಕರಾಗಿದ್ದಾರೆ. ಆದರೆ ಅತಂತ್ರ ವಿಧಾನಸಭೆ ಉಂಟಾಗುವ ಸಾಧ್ಯತೆಯಿಲ್ಲ. ಕಾಂಗ್ರೆಸ್ ಸ್ವತಂತ್ರ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದರು.
ಕಾಂಗ್ರೆಸ್ 2004 ಹಾಗೂ 2018ರಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು. ಆದರೆ ಎರಡೂ ಅವಧಿಯಲ್ಲಿ ಪೂರ್ಣಾವಧಿ ಸರ್ಕಾರ ಇರಲಿಲ್ಲ.