ಬೆಳಗಾವಿ : ಗೋಹತ್ಯೆ ಕಾಯ್ದೆಯನ್ನು ನಿಷೇಧ ಮಾಡಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಯನ್ನು ಸಚಿವ ಸತೀಶ್ ಜಾರಕಿಹೊಳಿ ಲೇಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯವರಿಗೆ ಮುಂದಿನ ಐದು ವರ್ಷಗಳ ಕಾಲ ಹೋರಾಟ ಮಾಡುವುದನ್ನು ಬಿಟ್ಟು ಇನ್ಯಾವ ಕೆಲಸವಿದೆ ಎಂದು ಪ್ರಶ್ನಿಸಿದ್ದಾರೆ.
ಹೋರಾಟ – ಹೋರಾಟ ಗೆಲ್ಲುವವರೆಗೂ ಹೋರಾಟ ಎಂದು ಬೋರ್ಡ್ ಬರೆಯಿಸಿಕೊಂಡು ಬಿಜೆಪಿಗರು ಹೋರಾಟ ಮಾಡಲಿ ಎಂದು ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ.
ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆಯೂ ಇದೇ ವೇಳೆ ಮಾತನಾಡಿದ ಅವರು, ಈ ಬಗ್ಗೆ ಶೀಘ್ರದಲ್ಲಿಯೇ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದಿದ್ದಾರೆ.