ವಿದ್ಯಾನಗರದಲ್ಲಿರುವ ಎಸ್‌ಬಿಐ ಶಾಖೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು ಕಚೇರಿಯ ಪೀಠೋಪಕರಣಗಳು ಹಾಗೂ ಕಡತಗಳು ಬೆಂಕಿಗಾಹುತಿಯಾಗಿವೆ. ಕ್ಯಾಷ್ ಕೌಂಟರ್ ಕೂಡ ಬೆಂಕಿಗಾಹುತಿಯಾಗಿದ್ದು ಸುಮಾರು ನಾಲ್ಕುವರೆ ಲಕ್ಷ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಭಾನುವಾರ ಉದ್ಯೋಗಿಗಳ ಸುಳಿವಿಲ್ಲವಾದ್ದರಿಂದ ಬೆಂಕಿ ತಕ್ಷಣಕ್ಕೆ ಯಾರ ಗಮನಕ್ಕೂ ಬಂದಿಲ್ಲ. ಹೊಗೆಯಾಡುತ್ತಿರುವುದನ್ನ ಸ್ಥಳೀಯರು ಗಮನಿಸಿದ್ದರು. ಅದೇ ಸಮಯದಲ್ಲಿ ಸೈರನ್ ಕೂಡ ಬಡಿದು ಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ರಜೆ ದಿನವೇ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡಕ್ಕೆ ನಿಖರ ಕಾರಣ ಮಾತ್ರ ತಿಳಿದು ಬಂದಿಲ್ಲ.
ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೆ ಆರ್ ಪೇಟೆ.
https://youtube.com/live/ABUFLoIQGx0
Read moreDetails