ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನವೆಂಬರ್ 6ರವರೆಗೆ ಬಳ್ಳಾರಿಯಲ್ಲಿ ಉಳಿಯಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಪುತ್ರಿಯನ್ನು ಭೇಟಿ ಅವರ ಜೊತೆಯಲ್ಲಿ ಉಳಿಯಲು ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡದಂತೆ ಸೂಚಿಸಿ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಇದೀಗ ಮೂರನೇ ಬಾರಿ ಬಳ್ಳಾರಿಗೆ ಭೇಟಿ ನೀಡಲು ಅವಕಾಶ ನೀಡಿದೆ.
ನ್ಯಾಯಮೂರ್ತಿ ಎಂ.ಆರ್. ಶಾ, ಮತ್ತು ನ್ಯಾಯಮೂರ್ತಿ ಕೃಷ್ಣ ಮುರಳಿ ಅವರನ್ನೊಳಗೊಂಡ ವಿಭಾಗೀಯ ಪೀಠ, ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದ್ದು, ನವೆಂಬರ್ ೯ರಿಂದ ಪ್ರತಿದಿನ ವಿಚಾರಣೆ ನಡೆಸಿ ೬ ತಿಂಗಳಲ್ಲಿ ಇಡೀ ಪ್ರಕರಣದ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದೆ.
ಇದೇ ವೇಳೆ ವಿಚಾರಣೆ ಆರಂಭವಾದ ನಂತರ ಪೂರ್ಣಗೊಳ್ಳುವವರೆಗೂ ಬಳ್ಳಾರಿ ಜಿಲ್ಲೆಯಿಂದ ಹೊರಗೆ ಇರುವಂತೆ ನ್ಯಾಯಾಲಯ ಇದೇ ವೇಳೆ ಸೂಚಿಸಿದೆ.












