ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪರೀಕ್ಷೆಯನ್ನುಮುಂದೂಡಿದರೆ ಸ್ನಾತಕೋತ್ತರ ಪದವಿಗಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET PG) ಪರೀಕ್ಷೆಗೆ ನೋಂದಾಯಿಸಿದ ಸಾವಿರಾರು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಪರೀಕ್ಷೆಯನ್ನು ವಿಳಂಬಗೊಳಿಸುವುದರಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎರಡು ಲಕ್ಷ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಮುಂದೆ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಗೆ ಕಾರಣವಾಗುತ್ತದೆ ರೋಗಿಗಳ ಆರೈಕೆ ಅತಿಮುಖ್ಯ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದ್ದು ಅರ್ಜಿಯನ್ನು ವಜಾಗೊಳಿಸಿದೆ.