ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಹಾಗೂ ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಜೀವಾವಧಿ ಶಿಕ್ಷೆಯಲ್ಲಿದ್ದವರೊಗೆ ಕ್ಷಮಾಪಣೆ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗುರುವಾರ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಆರೋಪಿಗಳಿಗೆ ಕ್ಷಮಾಪಣೆ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿ ವಿವಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ.ರಮಣ ಅವರಿದ್ದ ಪೀಠವು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರಕರಣದ ಸಂಬಂಧ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದ್ದರು ಮತ್ತು ವಿಚಾರಣೆಯನ್ನು ಎರಡು ವಾರಗಳವರೆಗೆ ಮುಂದೂಡಿದ್ದಾರೆ.
ಗುಜರಾತ್ ಸರ್ಕಾರದ ಉಪಶಮನ ನೀತಿಯಡಿಯಲ್ಲಿ ಆಗಸ್ಟ್ 15 ಸ್ವತಂತ್ರ ದಿನಾಚರಣೆಯ ಪ್ರಯುಕ್ತ ವಿವಿಧ ಪ್ರಕರಣಗಳಲ್ಲಿ ಬಂಧಿಯಾಗಿದ್ದ ಕೈದಿಗಳನ್ನು ಸಣ್ಣಡತೆಯ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ, ಗೋಧ್ರಾ ಜೈಲ್ಲಿನಿಂದ ಒಂದೇ ಪ್ರಕರಣದಲ್ಲಿ ಬಂಧಿಯಾಗಿದ್ದ 11 ಮಂದಿಯನ್ನು ಬಿಡುಗಡೆ ಮಾಡಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತು.
ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಿಪಿಐ(ಎಂ) ನಾಯಕಿ ಸುಬಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್, ಸಾಮಾಜಿಕ ಕಾರ್ಯಕರ್ತೆ ರೇಖಾ ರಾಣಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.