ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಡಿಎಂಕೆ ನಾಯಕ ವಿ ಸೆಂಥಿಲ್ ಬಾಲಾಜಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.
ಅ. 19 ರಂದು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶದ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್‌ಸಿ ಶರ್ಮಾ ಅವರ ಪೀಠ, ಸೆಂಥಿಲ್ ಬಾಲಾಜಿರ ಆರೋಗ್ಯದಲ್ಲಿ ಗಂಭೀರವಾದ ಸಮಸ್ಯೆ ಏನೂ ಇಲ್ಲ.ಈ ಹಿನ್ನೆಲೆಯಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲವೆಂದು ತಿರಸ್ಕರಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜೂನ್ 14 ರಂದು ಇಡಿ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿತ್ತು .