• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಂದೂಕು ಹೊಂದಲು ಕೊಡವರಿಗೆ ವಿಶೇಷ ಅವಕಾಶ : ರಾಜ್ಯಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

Any Mind by Any Mind
March 30, 2022
in ಕರ್ನಾಟಕ
0
ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ ಸಂವಿಧಾನ ದ್ರೋಹ?: ಸುಪ್ರೀಂಕೋರ್ಟ್ ಎದುರು 300ಕ್ಕೂ ಹೆಚ್ಚು ಪಿಟಿಷನ್!
Share on WhatsAppShare on FacebookShare on Telegram

ಕೊಡವ ಜನಾಂಗದವರಿಗೆ ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಮತ್ತು ಸಾಗಿಸಲು ನೀಡಲಾದ ವಿನಾಯಿತಿಯ ವಿರುದ್ಧ ಸುಪ್ರೀಂ ಕೋರ್ಟ್‌ ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮಾಡಿರುವ ನ್ಯಾಯಪೀಠವು ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ADVERTISEMENT

ಕೊಡವರಿಗೆ ಸರ್ಕಾರ ನೀಡಿದ್ದ ವಿನಾಯಿತಿಯನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮಂಗಳವಾರ ಕರ್ನಾಟಕ ಸರ್ಕಾರದ ಪ್ರತಿಕ್ರಿಯೆ ಕೇಳಿದೆ ಎಂದು ಬಾರ್‌ ಎಂಡ್‌ ಬೆಂಚ್ ವರದಿ ಮಾಡಿದೆ.

ಕೊಡವರಿಗೆ ಬಂದೂಕುಗಳನ್ನು ಹೊಂದಲು ಸರ್ಕಾರ ನೀಡಿರುವ ವಿಶೇಷ ಅವಕಾಶವನ್ನು ಪ್ರಶ್ನಿಸಿ ನಿವೃತ್ತ ಸೇನಾ ಅಧಿಕಾರಿ ಕ್ಯಾಪ್ಟನ್ ಚೇತನ್ ವೈಕೆ ಸುಪ್ರೀಂ ಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ಸೇನಾ ಅಧಿಕಾರಿಯ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ.

ಅಕ್ಟೋಬರ್ 29, 2019 ರಂದು, ಕೊಡವ ಸಮುದಾಯ ಮತ್ತು ಜುಮ್ಮಾ ಹಿಡುವಳಿದಾರರಿಗೆ ಶಸ್ತ್ರಾಸ್ತ್ರ ಕಾಯ್ದೆ, 1959 ರ ಕೆಲವು ನಿಬಂಧನೆಗಳಿಂದ ವಿನಾಯಿತಿ ನೀಡಿ ಕರ್ನಾಟಕ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿತ್ತು. ಇದರ ವಿರುದ್ಧ ಚೇತನ್‌, ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಒಂದು ಸಮುದಾಯಕ್ಕೆ ಮಾತ್ರ ಏಕೆ ಈ ವಿನಾಯಿತಿ ನೀಡಲಾಗಿದೆ ಎಂದು ಅವರು ಅರ್ಜಿಯಲ್ಲಿ ಪ್ರಶ್ನಿಸಿದ್ದರು.

ಕೊಡವ ಸಮುದಾಯದ ಪರ ವಾದ ಮಂಡಿಸಿದ ವಕೀಲರು, ಬ್ರಿಟಿಷರು ಭಾರತವನ್ನು ಆಳುತ್ತಿದ್ದಾಗಿನಿಂದ ಈ ವಿನಾಯಿತಿ ನೀಡಲಾಗಿದೆ ಎಂದು ಹೈಕೋರ್ಟ್‌ ಗಮನಕ್ಕೆ ತಂದಿದ್ದರು.
ಬಂದೂಕು ಕೊಡವರ ಪರಂಪರೆಯ ಭಾಗವಾಗಿದೆ. ಬಂದೂಕು ಪರಂಪರೆಗೆ ಸುದೀರ್ಘ 200 ವರ್ಷದ ಇತಿಹಾಸವಿದೆ. ಕೊಡವ ಮಾಪಿಳ್ಳೆಗಳಿಗೂ ಈ ಸವಲತ್ತಿದೆ. ಜಮ್ಮಾ ಭೂಮಿ‌ ಹೊಂದಿದವರಿಗೂ ವಿನಾಯಿತಿಯಿದೆ ಎಂದು ಹೈಕೋರ್ಟ್‌ ವಿಚಾರಣೆ ವೇಳೆ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ, ಸಜನ್‌ ಪೂವಯ್ಯ, ಧ್ಯಾನ್ ಚಿನ್ನಪ್ಪ, ಎಂ.ಟಿ.ನಾಣಯ್ಯ ಸಹ ವಾದ ಮಂಡಸಿದ್ದರು.

ಕೊಡವರಿಗೆ ಸ್ವಾತಂತ್ರ್ಯ ಪೂರ್ವದಿಂದಲೇ ಈ ರೀತಿ ರಿಯಾಯಿತಿ ಇದೆ. ಕೊಡವರು, ಜಮ್ಮಾ ಭೂಮಿ ಹೊಂದಿದವರಿಗೆ ಈ ರಿಯಾಯಿತಿ ಕಲ್ಪಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯಲ್ಲೇ ಬಂದೂಕು ಪರವಾನಗಿ ವಿನಾಯಿತಿ ಇದೆ. ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಮಧ್ಯ ಪ್ರವೇಶದ ಅಗತ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತ್ತು. ಅಲ್ಲದೆ, ಸರ್ಕಾರದ ಅಧಿಸೂಚನೆಯನ್ನು ಎತ್ತಿಹಿಡಿದು ವಿನಾಯಿತಿಯನ್ನು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರ ಚೇತನ್‌ ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು.

ಸರ್ಕಾರದ ಅಧಿಸೂಚನೆಯು ʼಜಾತಿ / ಜನಾಂಗ ಮತ್ತು ಪೂರ್ವಜರ ಭೂ ಹಿಡುವಳಿʼ ಆಧಾರದ ಮೇಲೆ ತಾರತಮ್ಯವನ್ನು ಸೃಷ್ಟಿಸುತ್ತದೆ ಎಂದು ಅವರು ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ. ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್ 41 ರ ಪ್ರಕಾರ, ʼಸಾರ್ವಜನಿಕ ಹಿತಾಸಕ್ತಿʼ ಯಲ್ಲಿ ಮಾತ್ರ ಶಸ್ತ್ರಾಸ್ತ್ರ ಪರವಾನಿಗೆ ಪಡೆಯುವುದರಿಂದ ವಿನಾಯಿತಿಯನ್ನು ನೀಡಬಹುದು ಎಂದು ಚೇತನ್ ಅವರು ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.
ʼಆದಾಗ್ಯೂ, ಕೊಡವ ಸಮುದಾಯಕ್ಕೆ ಅಂತಹ ವಿನಾಯಿತಿ ನೀಡುವ ಕುರಿತು ಅಧಿಸೂಚನೆಯಲ್ಲಿ ಯಾವುದೇ ಕಾರಣವನ್ನು ನೀಡಲಾಗಿಲ್ಲʼ ಎಂದು ಅವರು ಆರೋಪಿಸಿದ್ದಾರೆ. ಈ ಅರ್ಜಿಯನ್ನು ಇದೀಗ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನೊಟೀಸ್‌ ನೀಡಿದೆ.

Tags: BJPCongress PartyCovid 19ಕೊಡವಬಂದೂಕುಬಿ ಎಸ್ ಯಡಿಯೂರಪ್ಪಬಿಜೆಪಿಸುಪ್ರೀಂ ಕೋರ್ಟ್‌
Previous Post

ಶ್ರಮ ಶ್ರಮಿಕ ಮತ್ತು ಶ್ರಮಜೀವಿಗಳು- ಐಕಮತ್ಯದ ಧ್ವನಿಗಾಗಿ

Next Post

ತಂದೆ, ಮಗಳ ಸಾವಿನ ಬಳಿಕ ಎಚ್ಚೆತ್ತ BESCOM : ಟ್ರಾನ್ಸ್ ಫಾರ್ಮರ್ ಸರ್ವೇಗಿಳಿದ ವಿದ್ಯುತ್ ಮಂಡಳಿ!

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ತಂದೆ, ಮಗಳ ಸಾವಿನ ಬಳಿಕ ಎಚ್ಚೆತ್ತ BESCOM : ಟ್ರಾನ್ಸ್ ಫಾರ್ಮರ್ ಸರ್ವೇಗಿಳಿದ ವಿದ್ಯುತ್ ಮಂಡಳಿ!

ತಂದೆ, ಮಗಳ ಸಾವಿನ ಬಳಿಕ ಎಚ್ಚೆತ್ತ BESCOM : ಟ್ರಾನ್ಸ್ ಫಾರ್ಮರ್ ಸರ್ವೇಗಿಳಿದ ವಿದ್ಯುತ್ ಮಂಡಳಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada