ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವ ಮೂಲಕ ದಲಿತರಿಗೆ ಉದ್ಯೋಗಾವಕಾಶ ಹೆಚ್ಚಿಸಬೇಕು ಎಂದು ಅನೇಕ ಹೋರಾಟಗಳು ನಡೆದ್ದು ಈಗ ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಸರ್ಕಾರ ತನ್ನ ಸಚಿವ ಸಂಪುಟದ ಉಪಸಮಿತಿ ರಚೆನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಉಪಸಮಿತಿಯಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪನವರು ಅಧ್ಯಕ್ಷರಾದರೆ, ಗೃಹ ಸಚಿವ ಪರಮೇಶ್ವರ್, ಸಚಿವ ಕೆ.ಹೆಚ್ ಮುನಿಯಪ್ಪ, ಸಚಿವ ಹೆಚ್.ಕೆ ಪಾಟೀಲ್, ಸಚಿವ ಸತೀಶ್ ಜಾರಕಿಹೊಳಿ, ಶಿವರಾಜ್ ಸಂಗಪ್ಪ ತಂಗಡಗಿ, ಹಾಗೂ ಸಚಿವ ಬಿ ನಾಗೇಂದ್ರ ಅವರು ಸದಸ್ಯರಾಗಿ ನೇಮಕವಾಗಿದ್ದಾರೆ.
SC-ST ಸಮುದಾಯದ ಬ್ಯಾಕ್‌ಲಾಗ್ ಹುದ್ದೆ ಭರ್ತಿ ಮಾಡಲು ಹಾಗೂ ಪರಮಾರ್ಶಿಸಲು ಈ ಮೇಲಿನ ಸಚಿವರ ಉಪಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಷ್ಟ ಪಂಗಡದವರಿಗೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರಿ ಸೇವೆಯಲ್ಲಿ ಅ ಸಮುದಾಯಗಳಿಗೆ ಕಲ್ಪಿಸಿದ ಪ್ರಾತಿನಿಧ್ಯ ಕಸಿದುಕೊಂಡಂತೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮುಂದಿನ ಆರು ತಿಂಗಳ ಅಧಿಯಲ್ಲಿ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿಯಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಸಮರೋಪಾದಿಯಾಗಿ ಭರ್ತಿ ಮಾಡಬೇಕು ಎಂದು ಇದೇ ಸೆಪ್ಟೆಂಬರ್ 29 ರಂದು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಸಮಿತಿಯನ್ನು ರಚನೆ ಮಾಡಿದೆ.






