ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ Sub Inspector ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದ ಹಿನ್ನೆಲೆಯಲ್ಲಿ 545 ಹುದ್ದೆ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತು ಪೊಲೀಸ್ ನೇಮಕಾತಿ ವಿಭಾಗದ ADGP ಅಮಿತ್ ಪಾಲ್ ತುರ್ತು ಸಂದೇಶ ರವಾನಿಸಿದ್ದಾರೆ.
ಕಳೆದ ವರ್ಷ 545 PSI ಹುದ್ದೆಗೆ ನೇಮಕಾತಿಗೆ ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿತ್ತು. ಆದರೆ, ಇತ್ತೀಚಿಗೆ ಹೊರಬಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ (371J) ಮೀಸಲಾತಿಯಲ್ಲಿ ಅನ್ಯಾಯ ಆಗಿದೆ ಹಾಗೂ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಪರೀಕ್ಷೆಗೆ ಹಾಜರಾದ ಕೆಲ ಅಭ್ಯರ್ಥಿಗಳು ಆರೋಪಿಸಿದ್ದರಿಂದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನಿಸಿದರು. ಸುದ್ದಿ ಮೂಲಗಳ ಪ್ರಕಾರ ಆಡಳಿತಾತ್ಮಕ ಕಾರಣಗಳಿಂದಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.








