ರಾಜ್ಯದಲ್ಲಿ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ.
ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ. ಜೂನ್ ಒಂದನೇ ತಾರೀಕಿಗೆ ಕಡ್ಡಾಯವಾಗಿ ಮಗುವಿನ ವಯಸ್ಸು 6 ವರ್ಷ ಪೂರ್ಣಗೊಂಡಿರಬೇಕು.
ಜೂನ್ 1ಕ್ಕೆ 6 ವರ್ಷ ಪೂರ್ಣಗೊಂಡ ಮಗು ನೇರವಾಗಿ ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿ ನಿಗದಿ. ಶಾಲೆಗೆ ಮಗು ದಾಖಲಾತಿಯ ವಯೋಮಿತಿ ನಿಗಧಿ ಮಾಡಿ ಆದೇಶ ಹೊರಡಿಸಿದ ಸರ್ಕಾರ.
ಈ ಹಿಂದೆ 5 ವರ್ಷ 5 ತಿಂಗಳು ಆದರೆ ಸಾಕು ಎಂಬ ನಿಯಮವಿತ್ತು ಇದೀಗ ಅದನ್ನು ಪರಿಷ್ಕರಣೆ ಮಾಡಿ ಹೊಸ ವಯೋಮಿತಿ ನಿಗದಿ ಮಾಡಿ ಸುತ್ತೋಲೆ ಹೊರಡಿಸಲಾಗಿದೆ.