ಪ್ರವಾಸಕ್ಕೆಂದು ತೆರಳುತ್ತಿದ್ದ ಶಾಲಾ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡದ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತಕ್ಕೀಡಾದ ಶಾಲಾ ಬಸ್ ಹುಬ್ಬಳ್ಳಿಯ ಸೇಂಟ್ ಅಂಟೋನಿ ಪಬ್ಲಿಕ್ ಶಾಲೆಗೆ ಸೇರಿದ ಬಸ್ ಎಂದು ತಿಳಿದು ಬಂದಿದೆ. ಉತ್ತರಕನ್ನಡದ ಪ್ರವಾಸಿ ತಾಣಕ್ಕೆ ಕರೆದುಕೊಂಡು ಹೋಗುವಾಗ ದುರ್ಘಟನೆ ಸಂಭವಿಸಿದೆ.
ಬಸ್ನಲ್ಲಿ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರಿಗೂ ತೀವ್ರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
