ರಾಜ್ಯದ ನಾನಾ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದ ಮುನ್ನೆಚ್ಚರಿಕೆ ಕ್ರಮದ ಹಿನ್ನಲೆ, ಶಾಲೆಗಳಿಗೆ ರಜೆ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.
ಆಯುಕ್ತ ವಿಶಾಲ್ ಆರ್ ಅವರು ಹೊರಡಿಸಿರುವ ಆದೇಶದಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗುವುದಕ್ಕೆ ತೊಂದರೆಯಾಗುತ್ತಿದೆ.
ಹೀಗಾಗಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದ್ರೆಯಾಗದಂತೆ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ನೋಡಿಕೊಂಡು, ರಜೆ ನೀಡಬೇಕು ಎಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬರದಿರುವ ಪತ್ರದಲ್ಲಿ ಹೇಳಿದ್ದಾರೆ. ಇದೇ ವೇಳೆ ಅವರು ಒಂದು ವೇಳೆ ರಜೆ ನೀಡಿದರೆ, ಮುಂದಿನ ದಿನದಲ್ಲಿ ತರಗತಿಯನ್ನು ಸರಿದೂಗಿಸಬೇಕು ಎಂದು ಸೂಚನೆ ನೀಡಿದ್ದಾರೆ.







