• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಕ್ಕಳ ಸುರಕ್ಷತೆಗಾಗಿ ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ: ಸಚಿವ ಡಾ.ಕೆ.ಸುಧಾಕರ್

Any Mind by Any Mind
July 22, 2021
in ಕರ್ನಾಟಕ, ರಾಜಕೀಯ
0
ಬ್ಲಾಕ್ ಫಂಗಸ್ ಸಾಂಕ್ರಾಮಿಕ ಅಲ್ಲ: ಸಚಿವ ಸುಧಾಕರ್

Dr K Sudhakar, Medical Education Minister addressing press regarding Arogya Sethu App and Covid-19 lockdown, Coronavirus at Vidhana Soudha in Bengaluru on Thursday, 21 May 2020. Photo by S K Dinesh

Share on WhatsAppShare on FacebookShare on Telegram

ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಗಳನ್ನು ಯಾವುದೋ ಒಂದು ದಿನ ಆರಂಭಿಸಲೇಬೇಕು. ಮಕ್ಕಳು ಯಾವಾಗಲೂ ಆನ್ ಲೈನ್ ತರಗತಿಯ ಮುಂದೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಪಾಯವಿದೆ. ಆದ್ದರಿಂದ ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪರಿಣಿತರ ಅಭಿಪ್ರಾಯ, ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಾಲೆಯ ಸಿಬ್ಬಂದಿ ವರ್ಗವನ್ನು ವಿಶೇಷ ಗುಂಪಾಗಿ ಪರಿಗಣಿಸಿ ಅವರಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯ ಆರಂಭಿಸಬೇಕೆಂದು ತೀರ್ಮಾನಿಸಲಾಗಿದೆ. ಮಕ್ಕಳ ಪೋಷಕರಿಗೆ, ಕುಟುಂಬದವರಿಗೆ ಲಸಿಕೆ ನೀಡಲಾಗಿದೆ. ಇನ್ನೂ ಕೆಲ ದಿನಗಳು ಕಳೆದರೆ ಲಸಿಕೆ ಪಡೆದವರ ಸಂಖ್ಯೆ 3 ಕೋಟಿಗೆ ತಲುಪಲಿದೆ. ಅನೇಕರಿಗೆ ಪಾಸಿಟಿವ್ ಬಂದು ಹೋಗಿ ಅವರಲ್ಲಿ ಆ್ಯಂಟಿಬಾಡಿ ಉತ್ಪಾದನೆಯಾಗಿರುವುದೂ ಇದೆ ಎಂದಿದ್ದಾರೆ.

ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಕಾಲೇಜು ಆರಂಭಿಸಲು ತೀರ್ಮಾನಿಸಲಾಗುತ್ತಿದೆ. ಇದೇ ರೀತಿ ಹಂತಹಂತವಾಗಿ ನೋಡಿಕೊಂಡು ಈ ಬಗ್ಗೆ ತೀರ್ಮಾನಿಸಲಾಗುತ್ತದೆ. ಇಂತಹ ತೀರ್ಮಾನವನ್ನು ಬಹಳ ಎಚ್ಚರದಿಂದ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.

ಪ್ರತಿ ದಿನ ರಾಜ್ಯದ ಒಟ್ಟು ಪ್ರಕರಣಗಳಲ್ಲಿ ಶೇ.5 ರಷ್ಟನ್ನು ಹೊಸ ವೈರಾಣು ಅಧ್ಯಯನಕ್ಕೆ ಒಳಪಡಿಸಿ ಪರೀಕ್ಷಿಸಲಾಗುತ್ತಿದೆ. ಈ ಮಾಹಿತಿಯನ್ನು ಐಸಿಎಂಆರ್ ಜೊತೆ ಹಂಚಿಕೊಳ್ಳಲಾಗುತ್ತಿದೆ. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದಿದ್ದಾರೆ.

Tags: BJPCovid 19Dr Sudhakarschool reopenಕೋವಿಡ್-19ಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಹೊಸ ಸರ್ಕಾರವು ಯಡಿಯೂರಪ್ಪನಂತೆ ಭ್ರಷ್ಟವಾಗಲಿದೆ: ಸಿದ್ದರಾಮಯ್ಯ

Next Post

ಸಿಎಂ ಬಿ ಎಸ್ ವೈ ರಾಜಿನಾಮೆ ನೀಡಿದರೆ ವಲಸಿಗ ಸಚಿವರ ಸ್ಥಿತಿ ಅತಂತ್ರ?

Related Posts

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ
Top Story

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

by ಪ್ರತಿಧ್ವನಿ
February 6, 2026
0

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಸಿಐಡಿ(CID )ಸೈಬರ್ ಕ್ರೈಂ( Cyber Crime) ವಿಭಾಗ ಭಾರೀ ಕಾರ್ಯಾಚರಣೆ ನಡೆಸಿದೆ. ಮ್ಯೂಲ್ ಅಕೌಂಟ್‌ಗಳ ಮೂಲಕ...

Read moreDetails
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Modi speech:  ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

Modi speech: ಕಲಾಪದಲ್ಲಿ ಕೊನೆಗೂ ಮೋದಿ ಭಾಷಣ: ಹೇಳಿದ್ದೇನು ?

February 5, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Next Post
ಭ್ರಷ್ಟಾಚಾರ ದೂರು ವಜಾಗೊಳಿಸಿದ ಕೋರ್ಟ್: ಸಿಎಂಗೆ ನಿರಾಳ

ಸಿಎಂ ಬಿ ಎಸ್ ವೈ ರಾಜಿನಾಮೆ ನೀಡಿದರೆ ವಲಸಿಗ ಸಚಿವರ ಸ್ಥಿತಿ ಅತಂತ್ರ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada