ಶಾಲೆಗಳನ್ನು ಮೇ 16ರ ಬದಲಾಗಿ, ಜೂನ್ 1 ರಿಂದ ಆರಂಭಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಹೌದು, ‘ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಉರಿಬಿಸಿಲು ಹೆಚ್ಚಿದೆ. ಆದ್ದರಿಂದ ಶಾಲೆಗಳನ್ನು ಮೇ 16ರ ಬದಲಾಗಿ, ಜೂನ್ 1 ರಿಂದ ಆರಂಭಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ರಾಜ್ಯದ್ಯಂತ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ನಡುವೆ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಮೇ 16 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿರುವುದು ಪೋಷಕರಿಗೆ ಆತಂಕ ಸೃಷ್ಠಿಯಾಗಿದೆ. ಶಾಲೆ ಆರಂಭಿಸಿದರೂ, ಮಕ್ಕಳು ಸನ್ ಸ್ಟ್ರೋಕ್ಗೆ ಒಳಗಾಗಬಹುದು’ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಸಿದ್ಧರಿಲ್ಲ ಎಂಬುದನ್ನು ಮನಗಂಡಿದ್ದೇನೆ ಎಂದು ಹೇಳಿದ್ದಾರೆ.
‘ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳನ್ನು ಜೂ.1 ರಿಂದ ಆರಂಭಿಸಬೇಕು. ಕಡಿಮೆ ಬೀಳುವ ಶೈಕ್ಷಣಿಕ ದಿನಗಳಲ್ಲಿ ಪ್ರತಿ ಶನಿವಾರ ಹೆಚ್ಚುವರಿ ತರಗತಿ ನಡೆಸುವ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ’ ಎಂದು ಅವರು ತಿಳಿಸಿದ್ದಾರೆ.