
ಗುಜರಾತ್:ವಡೋದರಾದಲ್ಲಿಖಾಸಗಿ ಶಾಲೆಯೊಂದರ ಗೋಡೆ ಕುಸಿದ ಘಟನೆ ನಡೆದಿದೆ. ಪರಿಣಾಮ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ.ವಡೋದರದ ವಘೋಡಿಯಾ ರಸ್ತೆ ಸಮೀಪದ ಶ್ರೀ ನಾರಾಯಣ ಖಾಸಗಿ ಶಾಲೆಯ ಮೊದಲ ಮಹಡಿಯಲ್ಲಿದ್ದ ತರಗತಿಯ ಗೋಡೆ ಕುಸಿದಿದ್ದು, ಮಧ್ಯಾಹ್ನ 12.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
https://x.com/navbharattimes/status/1814354576700846116?s=12&t=t43vNYx0aXGDHIczgUZ8RQ
ಈ ಘಟನೆಗೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಮಧ್ಯಾಹ್ನ 12.30 ರ ಸುಮಾರಿಗೆ ಘಟನೆ ಸಂಭವಿಸಿದೆ. ಒಬ್ಬ ವಿದ್ಯಾರ್ಥಿ ತಲೆಗೆ ಪೆಟ್ಟಾಗಿದೆ. ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಶಾಲಾ ಪ್ರಾಂಶುಪಾಲ ರೂಪಲ್ ಶಾ ಹೇಳಿದ್ದಾರೆ.ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸಂಪೂರ್ಣ ಘಟನೆ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಶಾಲಾ ಆಡಳಿತ ಮಂಡಳಿಯ ಬೇಜಾವಬ್ದಾರಿಯ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.