• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

SDPI ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ- ಸಿದ್ಧರಾಮಯ್ಯ ಆಗ್ರಹ

by
August 18, 2020
in ಕರ್ನಾಟಕ
0
SDPI ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ- ಸಿದ್ಧರಾಮಯ್ಯ ಆಗ್ರಹ
Share on WhatsAppShare on FacebookShare on Telegram

ಕಾವಲ ಭೈರಸಂದ್ರದಲ್ಲಿ ನಡೆದ ಗಲಭೆಯ ಆರೋಪವನ್ನು ಬಿಜೆಪಿ ದಿನಕ್ಕೊಂದು ಪಕ್ಷದ ಮೇಲೆ ಹೊರಿಸುತ್ತಿದೆ. ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಬಿಜೆಪಿ ನಾಯಕರು ಗಲಭೆಗೆ SDPI ಕಾರಣವೆಂದು ನೇರವಾಗಿ ಆರೋಪಿಸಿದ್ದಾರೆ, ಅಲ್ಲದೆ SDPI ಯನ್ನು ನಿಷೇಧಿಸಬೇಕೆಂದೂ ಆಗ್ರಹಿಸಿದ್ದಾರೆ. ಶೋಭಾ ಕರಂದ್ಲಾಜೆ, SDPI ನಿಷೇಧಿತ ಸಂಘಟನೆಗಳಾದ ಸಿಮಿ, ಇಂಡಿಯನ್‌ ಮುಜಾಹಿದ್‌ ನ ಇನ್ನೊಂದು ಮುಖ ಎಂದು ಹೇಳಿದ್ದರು.

ಇನ್ನು ಕೆಲವು ಬಿಜೆಪಿ ನಾಯಕರು ಗಲಭೆಗೆ ಕಾಂಗ್ರೆಸ್‌ ಕಾರಣ ಎಂದು ಆರೋಪಿಸಿದ್ದಾರೆ. ಈ ಆರೋಪಗಳಿಗೆಲ್ಲಾ ಉತ್ತರದಂತೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಟ್ವೀಟ್‌ ಮಾಡಿದ್ದು, ಗಲಭೆಗೆ ಸರ್ಕಾರದ ವೈಫಲ್ಯವೇ ಕಾರಣವೆಂದಿದ್ದಾರೆ.

SDPI is the new face of banned terror org SIMI & Indian Mujahideen.

It has been proved by the central agencies of SDPI's involvement in many murders & incidents that stirred social harmony.

Even in the murder of RSS karyakarta Sri Rudresh in Bengaluru, CBI found SDPI link.
1/3 pic.twitter.com/MAt76wBxo2

— Shobha Karandlaje (@ShobhaBJP) August 14, 2020


ಸರಣಿ ಟ್ವೀಟ್‌ ಮೂಲಕ ಸರ್ಕಾರವನ್ನು ಟೀಕಿಸಿದ ಸಿದ್ಧರಾಮಯ್ಯ, ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ? ಎಂದು ಪ್ರಶ್ನಿಸಿದ್ದಾರೆ.

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ? ಎಂದು ಪ್ರಶ್ನಿಸಿರುವ ಸಿದ್ಧರಾಮಯ್ಯ SDPI ಸಂಘಟನೆ ಬಿಜೆಪಿಯ ನೆರಳಲ್ಲೇ ಇದೆ ಎಂದು ಸೂಚ್ಯವಾಗಿ ಹೇಳಿದ್ದಾರೆ.

ಯಡಿಯೂರಪ್ಪ ಅವರನ್ನು ಪದಚ್ಯುತಗೊಳಿಸಲು ಆರೆಎಸ್‌ಎಸ್‌ ಬಣ ಡಿಜೆ ಹಳ್ಳಿ ಪ್ರಕರಣವನ್ನು ಬಳಸುತ್ತಿದೆ ಎಂದಿರುವ ಸಿದ್ದರಾಮಯ್ಯ, ʼಕರ್ನಾಟಕದ ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಯಡಿಯೂರಪ್ಪ ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ.ʼ ಎಂದಿದ್ದಾರೆ.

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ,
ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ.
ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ?
6/6#bangloreviolence

— Siddaramaiah (@siddaramaiah) August 18, 2020


ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ. ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು, ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್ ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ಪ್ರಕರಣದ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ ಎಂದು ಬಿಜೆಪಿ ಸರ್ಕಾರದ ಮೇಲೆಯೇ ಆರೋಪ ಹೊರಿಸಿದ್ದಾರೆ.

.@BJP4Karnataka ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. @BSYBJP ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ.
3/6#bangloreviolence

— Siddaramaiah (@siddaramaiah) August 18, 2020


ADVERTISEMENT
Tags: ಎಸ್‌ಡಿಪಿಐಸಿದ್ದರಾಮಯ್ಯ
Previous Post

ಪ್ರಜಾಸತ್ತೆ ಸ್ವಾಸ್ಥ್ಯ, ನ್ಯಾಯಾಂಗ ಸ್ವಾಯತ್ತತೆ ಚರ್ಚೆಗೆ ಬಿರುಸು ತಂದ ನ್ಯಾಯಾಂಗ ನಿಂದನೆ ಪ್ರಕರಣ

Next Post

ಮೋದಿ ವಿರುದ್ಧ ಗುಡುಗಿದ್ದ ಚುನಾವಣಾ ಆಯುಕ್ತ ಲಾವಸ ರಾಜೀನಾಮೆ!

Related Posts

Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಇಂದು ಸೆಷನ್ಸ್‌ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡಲಾಯಿತು. ಈ ವೇಳೆ ನ್ಯಾಯಾಧೀಶರು ಕೇಳಿದ ಪ್ರಶ್ನೆಗೆ ನಾವು ಹತ್ಯೆ ಮಾಡಿಲ್ಲ ಎಂದು...

Read moreDetails
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025
Next Post
ಮೋದಿ ವಿರುದ್ಧ ಗುಡುಗಿದ್ದ ಚುನಾವಣಾ ಆಯುಕ್ತ ಲಾವಸ ರಾಜೀನಾಮೆ!

ಮೋದಿ ವಿರುದ್ಧ ಗುಡುಗಿದ್ದ ಚುನಾವಣಾ ಆಯುಕ್ತ ಲಾವಸ ರಾಜೀನಾಮೆ!

Please login to join discussion

Recent News

Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada