• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸೆಬಾಸ್ಟಿಯನ್ ಡೇವಿಡ್ ನಿರ್ದೇಶನದ “ಬೇಲಿ ಹೂ” ಚಿತ್ರಕ್ಕೆ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಇಂಡಿಯನ್ ಸಿನಿಮಾ‌ ವಿಭಾಗದಲ್ಲಿ “ತೀರ್ಪುಗಾರರ ವಿಶೇಷ ಉಲ್ಲೇಖ.

ಪ್ರತಿಧ್ವನಿ by ಪ್ರತಿಧ್ವನಿ
March 16, 2025
in ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram


ಮೂವತ್ತೈದು ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್ ಈವರೆಗೂ “ಅನಿಶ್ಚಿತ”, ” ಜ್ಯೋತಿ ಅಲಿಯಾಸ್ ಕೋತಿರಾಜ್”, “ಮಾನ”, ” ಧ್ವನಿ” “ಬೇಲಿ ಹೂ” ಹಾಗೂ ಪ್ರಸ್ತುತ ತನಿಷಾ ಕುಪ್ಪಂಡ ಹಾಗೂ ಮಾಲಾಶ್ರೀ ಅವರು ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಪೆನ್ ಡ್ರೈವ್” ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಸೆಬಾಸ್ಟಿಯನ್ ಡೇವಿಡ್‌ ಅವರ ನಿರ್ದೇಶನದ ಎಲ್ಲಾ ಚಿತ್ರಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ವಿಶೇಷ.

ADVERTISEMENT

ಪ್ರಸ್ತುತ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಇಂಡಿಯಾ ಸಿನಿಮಾ ಹಾಗೂ ಕನ್ನಡ ಸಿನಿಮಾ ಎರಡು ವಿಭಾಗಗಳಲ್ಲಿ ವೆಂಕಟೇಶ್ ಎಸ್ ನಿರ್ಮಿಸಿ, ಸೆಬಾಸ್ಟಿಯನ್ ಡೇವಿಡ್ ಅವರು ನಿರ್ದೇಶಿಸಿರುವ ಹಾಗೂ ಸಂಪತ್ ಮೈತ್ರೇಯ, ಶ್ವೇತ ಶ್ರೀವಾಸ್ತವ್, ಲಯನ್ ವೆಂಕಟೇಶ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಬೇಲಿ ಹೂ” ಆಯ್ಕೆಯಾಗಿತ್ತು‌. ಅದರಲ್ಲೂ ಇಂಡಿಯಾ ಸಿನಿಮಾ ವಿಭಾಗದಲ್ಲಿ ಆಯ್ಕೆಯಾಗಿದ್ದ ಏಕೈಕ ಕನ್ನಡ ಸಿನಿಮಾ “ಬೇಲಿ ಹೂ”.

ನೈಜ ಫಟನೆ ಆಧಾರಿತ ಚಿತ್ರ ” ಬೇಲಿ ಹೂ”. ಆಶಾ ಎಂಬ ಗ್ರಾಮೀಣ ಭಾಗದ ಹೆಣ್ಣುಮಗಳು ಮದ್ಯ ವ್ಯಸನಿ ಗಂಡನಿಂದ ನೊಂದು ಎರಡು ಮಕ್ಕಳ ಜೀವನಕ್ಕಾಗಿ ಹೆಣ ಹೂಳುವ ಕೆಲಸದಿಂದ ಆರಂಭಿಸಿ, ಅಂಬ್ಯುಲೆನ್ಸ್ ಚಾಲಕಿಯಾಗುತ್ತಾಳೆ. ಇಂತಹ ಆದರ್ಶ ಮಹಿಳೆ ಕುರಿತಾದ ಈ ಚಿತ್ರದಲ್ಲಿ ನಟಿಸುವ ಎಲ್ಲಾ ಕಲಾವಿದರ ಅಭಿನಯ ತುಂಬಾ ಅಮೋಘವಾಗಿ ಮೂಡಿಬಂದಿದೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಇದನ್ನು ಶಿಂಗ್ ಸೌಂಡ್ ನಲ್ಲಿ ಚಿತ್ರಿಸಲಾಗಿದ್ದು, ಡಬ್ಬಿಂಗ್ ಸಹ ಮಾಡಿಲ್ಲ. .

ಇಂತಹ ಅಪರೂಪದ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಈ ಬಾರಿಯ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಇಂಡಿಯಾ ಸಿನಿಮಾ ವಿಭಾಗದಲ್ಲಿ‌ “ತೀರ್ಪುಗಾರರ ವಿಶೇಷ ಉಲ್ಲೇಖ” ದೊರಕಿದೆ. ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಇಂಡಿಯಾ ಸಿ‌ನಿಮಾ ವಿಭಾಗದಲ್ಲಿ ಆಯ್ಕೆಯಾಗಿದ್ದ “ಬೇಲಿ ಹೂ” ಸಿನಿಮಾಕ್ಕೆ “ತೀರ್ಪುಗಾರರ ವಿಶೇಷ ಉಲ್ಲೇಖ” ದೊರಕಿರುವುದಕ್ಕೆ ಚಿತ್ರತಂಡದಲ್ಲಿ ಸಂತಸ ಮನೆ ಮಾಡಿದೆ.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಮ್ಮ ಚಿತ್ರಕ್ಕೆ ಸಿಕ್ಕ ಪ್ರಶಂಸೆಗೆ ಮನ ತುಂಬಿ ಬಂದಿದೆ. ನಮ್ಮ ನಿರ್ಮಾಪಕರಾದ ಎಸ್ ವೆಂಕಟೇಶ್ ಅವರು ಶೀಘ್ರದಲ್ಲೇ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ ಎನ್ನುತ್ತಾರೆ ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್.

Tags: dos orugas sebastian yatraFilmmaana sebastin david moviemovies filmsan sebastiansan sebastian cheesecakesan sebastian film festival's highest awardsan sebastian spainsebastiansebastian davidsebastian stansebastian stan interviewsebastian stan moviessebastian stan musclesebastian stan muscle gainsebastian stan shirtlesssebastian stan transformationsebastian stan workoutsebastian the crabsebastian yatra
Previous Post

ರೆಬೆಲ್ ಸ್ಟಾರ್ ಮನೆಯಲ್ಲಿ ಸಂಭ್ರಮ..! ಅಂಬಿ ಮೊಮ್ಮಗನ ನಾಮಕರಣಕ್ಕೆ ಬರ್ತಾರಾ ನಟ ದರ್ಶನ್?

Next Post

ಪಿಯು ಪರೀಕ್ಷೆಯಲ್ಲಿ ಅಸಮಾನತೆ: ಲೆಕ್ಕಶಾಸ್ತ್ರ ಪ್ರಶ್ನೆಗಳ ಗೊಂದಲದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ!

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಪಿಯು ಪರೀಕ್ಷೆಯಲ್ಲಿ ಅಸಮಾನತೆ: ಲೆಕ್ಕಶಾಸ್ತ್ರ ಪ್ರಶ್ನೆಗಳ ಗೊಂದಲದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ!

ಪಿಯು ಪರೀಕ್ಷೆಯಲ್ಲಿ ಅಸಮಾನತೆ: ಲೆಕ್ಕಶಾಸ್ತ್ರ ಪ್ರಶ್ನೆಗಳ ಗೊಂದಲದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada