ಬೆಂಗಳೂರು: ಕಾವೇರಿ ನದಿ ನೀರಿಗಾಗಿ ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈ ಬಂದ್ಗೆ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು ಸಂಘಟನೆಗಳು ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬಹುತೇಕ ಅಖಂಡ ಕರ್ನಾಟಕ ಸ್ತಬದ್ಧವಾಗಲಿದೆ. ಇದರ ನಡುವೆ ಸಾರ್ವಜನಿಕರ ಸಂಚಾರನಾಡಿ ಕೆಎಸ್ಆರ್ಟಿಸಿ ಹಾಗೂ ಬಿಎಂಪಿಟಿಸಿ ಬಸ್ ಸಂಚಾರಕ್ಕೆ ನಿಗಮಗಳು ತೀರ್ಮಾನಿಸಿವೆ. ಈ ಹಿನ್ನೆಲೆಯಲ್ಲಿ ನೌಕರರಿಗೆ ನಾಳೆ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ.
ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ನೌಕರರಿಗೆ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ. ದೀರ್ಘಾವಧಿ, ವಾರದ ರಜೆ ಹೊರತುಪಡಿಸಿ ನೌಕರರು ಹೊರತುಪಡಿಸಿ ಉಳಿದ ಎಲ್ಲಾ ನೌಕರರು ಕಡ್ಡಾಯವಾಗಿ ನಾಳೆ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ನೌಕರರಿಗೆ ಸಾರಿಗೆ ನಿಗಮಗಳು ಮೌಖಿಕ ಸೂಚನೆ ನೀಡಿವೆ.
ಸಾರಿಗೆ ನಿಗಮಗಳು ಅಗತ್ಯ ಸೇವೆಗಳ ಅಡಿಯಲ್ಲಿ ಬರುವುದರರಿಂದ ಸೇವೆ ನೀಡಬೇಕು. ಹೀಗಾಗಿ ಯಾರು ಸಹ ನಾಳಿನ ಬಂದ್ ನಲ್ಲಿ ಭಾಗಿಯಾಗುವಂತಿಲ್ಲ. ಒಂದು ವೇಳೆ ಕೆಲಕ್ಕೆ ಗೈರು ಆಗಿ ಬಂದ್ ನಲ್ಲಿ ಭಾಗಿಯಾದ್ರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುವುದಾಗಿ ಎಚ್ಚರಿಕೆ ಸಹ ನೀಡಲಾಗಿದೆ.