ಬೆಂಗಳೂರು :ಏ.೦6: ರಾಜ್ಯದ ಗಮನ ಸೆಳೆದಿದ್ದ ಹಲವು ವಿಧಾನಸಭಾ ಕ್ಷೇತ್ರಗಳ ಪೈಕಿ ಕೋಲಾರ ಕೂಡ ಒಂದಾಗಿದೆ. ಯಾಕಂದ್ರೆ ಇಲ್ಲಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡ್ತರೆ ಎಂಬ ಮಾತು ಕೇಳಿಬರುತ್ತಿತ್ತು. ಆದ್ರೆ ಕೊನೆ ಕ್ಷಣದಲ್ಲಿ ಸಿದ್ದರಾಮಯ್ಯ ಅವರು ವರಣದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ರು. ಇದಾದ ಬಳಿಕ ಕೋಲಾರದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಇನ್ನು ಉತ್ತರಿಸಿಲ್ಲ. ಈಗ ಕಾಂಗ್ರೆಸ್ ಪಕ್ಷ ಎರಡನೇ ಪಟ್ಟಿಯಲ್ಲೂ ಕೂಡ ಕೋಲಾರ ಕ್ಷೇತ್ರದ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ. ಹಾಗಾದ್ರೆ ಸಿದ್ದರಾಮಯ್ಯ ಅವರನ್ನ ವರುಣ ಕ್ಷೇತ್ರದ ಜೊತೆಗೆ ಕೋಲಾರದಿಂದಲೂ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧಾನ ಮಾಡಿದ್ಯಾ ಎಂಬ ಅನುಮಾನ ಎಲ್ಲೆಡೆ ಕಾಡುತ್ತಿದೆ. ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದದ್ದ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಅವರಿಗೂ ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ. ಕಡೂರಿನಿಂದ ದತ್ತಾಗೆ ಟಿಕೆಟ್ ಕೋಡ್ತಾರೆ ಅಥವಾ ಬೇರೆ ಅಭ್ಯರ್ಥಿಯನ್ನ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದ್ಯಾ ಎಂಬ ಅನುಮಾನ ಕಾಡುತ್ತಿದೆ.
ಎರಡನೇ ಪಟ್ಟಿಯಲ್ಲಿ ಯಾರಿಗೆ ಟಿಕೆಟ್ ಸಿಕ್ಕಿದೆ
ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನ ಎರಡನೇ ಪಟ್ಟಿಯಲ್ಲಿ 42 ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ಕಾಂಗ್ರೆಸ್ ಪಡೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಮೇಲುಕೋಟೆ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಲು ಪಕ್ಷ ನಿರ್ಧರಿಸಿದೆ.
ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಯಾಗಿದೆ. ಇದುವರೆಗೂ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಇನ್ನೂ 58 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.
ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಈ ಬಾರಿಯೂ ಘೋಷಣೆ ಆಗಿಲ್ಲ. ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ನೀಡಲು ವಿರೋಧ ಇದೆ. ಈ ಹಿನ್ನೆಲೆಯಲ್ಲಿ ಅವರ ಹೆಸರು ಮೊದಲ ಪಟ್ಟಿಯಲ್ಲಿ ಇರಲಿಲ್ಲ. ಟಿಕೆಟ್ ಘೋಷಣೆ ಆಗದ ಹಿನ್ನೆಲೆಯಲ್ಲಿ ಅವರು ಜಮೀರ್ ಅಹ್ಮದ್ ಖಾನ್ ಮೂಲಕ ಸಾಕಷ್ಟು ಲಾಬಿ ನಡೆಸಿದ್ದರು.

ಆದರೆ, ಎರಡನೇ ಪಟ್ಟಿಯಲ್ಲೂ ಅಖಂಡ ಶ್ರೀನಿವಾಸ್ ಮೂರ್ತಿ ಹೆಸರು ಕಾಣಿಸಿಕೊಂಡಿಲ್ಲ. ಜೊತೆಗೆ ಲಿಂಗಸುಗೂರಿನ ಹಾಲಿ ಶಾಸಕ ಡಿಎಸ್ ಹುಲಗೇರಿ, ಹರಿಹರ ಕ್ಷೇತ್ರದ ಹಾಲಿ ಶಾಸಕ ರಾಮಪ್ಪ, ಕುಂದಗೋಳದ ಹಾಲಿ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್ ಘೋಷಣೆ ಆಗಿಲ್ಲ.
ನಿಪ್ಪಾಣಿ ಕ್ಷೇತ್ರ -ಕಾಕಾ ಸಾಹೇಬ್ ಪಾಟೀಲ್, ಗೋಕಾಕ್ ಕ್ಷೇತ್ರ-ಮಹಾಂತೇಶ್ ಕಡಾಡಿ, ಬೀಳಗಿ ಕ್ಷೇತ್ರ – ಜೆ.ಟಿ.ಪಾಟೀಲ್, ಧಾರವಾಡ – ವಿನಯ್ ಕುಲಕರ್ಣಿ, ಗುರುಮಿಠಕಲ್ ಕ್ಷೇತ್ರ – ಬಾಬುರಾವ್ ಚಿಂಚನಸೂರ್, ಕಿತ್ತೂರು ಕ್ಷೇತ್ರ-ಬಾಬಾಸಾಹೇಬ್ ಬಿ.ಪಾಟೀಲ್ ಅಭ್ಯರ್ಥಿಗಳಾಗಿದ್ದಾರೆ.