ಬೆಂಗಳೂರು (Bengaluru): ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Exam) ಆರಂಭವಾಗಲಿದೆ.
ನಾಳೆಯಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯಗೊಳ್ಳಲಿದೆ.
ಈ ಬಾರಿ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಿರಲಿವೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ವಿಶೇಷ ಆಫರ್ ಘೋಷಿಸಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆ ತಿಳಿಸಿದೆ.
#karnataka #bengaluru #puc #pucexams #students