ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ವರ್ಷದ ಎಲ್ಲಾ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ, ಹಾಗೂ ಅವರ ಪ್ರಥಮ ಪಿಯು ಪರೀಕ್ಷೆಗಳ ಫಲಿತಾಂಶದ ಆಧಾರದಲ್ಲಿ ಅವರಿಗೆ ಗ್ರೇಡಿಂಗ್ ಕೊಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಯಾವುದಾದರೂ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ವ್ಯವಸ್ಥೆಯಲ್ಲಿ ಅಸಮಾಧಾನವಿದ್ದರೆ, ಅಂತಹವರಿಗೆ ಕರೋನಾ ಮುಗಿದ ಬಳಿಕ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೂಡಾ ಅವರು ತಿಳಿಸಿದ್ದಾರೆ.
ಕರೋನಾ ಹಿನ್ನೆಲೆಯಲ್ಲಿ CBSE, CISCE ದ್ವಿತೀಯ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಕರ್ನಾಟಕದಲ್ಲೂ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂಬ ಕೂಗು ಕೇಳಿಬಂದಿತ್ತು.