ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ದಾಖಲಾಗಿದ್ದ 2ನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್ ಮಾಡಲಾಗಿದೆ.
ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ (Medical Examination) ಮಾಡಲಾಗಿದೆ. ವಿಡಿಯೋದಲ್ಲಿ ಕಾಣಿಸಿರುವ ಪುರುಷನ ಅಂಗಾಂಗಳೊಂದಿಗೆ ಪ್ರಜ್ವಲ್ ರೇವಣ್ಣ ಅಂಗಗಳನ್ನು ಹೋಲಿಕೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಗುಜರಾತ್ನ ಅಹಮದಾಬಾದ್ನ ವಿಧಿ ವಿಜ್ಞಾನ ಪ್ರಯೋಗಾಲಯ (FSL) ಹಾಗೂ ವಿದೇಶಿ ತಜ್ಞರ ನೆರವು ಪಡೆದುಕೊಳ್ಳಲು ಎಸ್ ಐಟಿ ತಂಡ ಸಿದ್ಧವಾಗಿದೆ. ಹೀಗಾಗಿ ಹಲವಾರು ಟೆಸ್ಟ್ ಗಳನ್ನು ನಡೆಸಲಾಗುತ್ತಿದೆ. ಎಸ್ಐಟಿ ಅಧಿಕಾರಿಗಳು ಆರೋಪಿಯ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿನ ಮುಖ ಮರೆ ಮಾಚಿಕೊಂಡಿರುವ ವ್ಯಕ್ತಿಯ ಪತ್ತೆಗೆ ಅಂಗಾಂಗ ಪರೀಕ್ಷೆಗೆ ಮುಂದಾಗಿದೆ ಎನ್ನಲಾಗಿದೆ.
ಈಗಾಗಲೇ ಮೊದಲನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವೈದ್ಯಕೀಯ ಪರೀಕ್ಷೆ ನಡೆದಿತ್ತು. ಈಗ ದಾಖಲಾಗಿರುವ 2ನೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ಗೆ ವೈದ್ಯಕೀಯ ಪರೀಕ್ಷೆ ನಡೆದಿದೆ. ನಾಲ್ವರು ವೈದ್ಯರಿರುವ ತಂಡ 5 ಗಂಟೆಗಳ ಕಾಲ ಪರೀಕ್ಷೆ ನಡೆಸಿದೆ. ಆರೋಪಿ ಪ್ರಜ್ವಲ್ ಹಲವು ಮಹಿಳೆಯ ಜೊತೆ ಇದ್ದ ಎನ್ನಲಾದ ವೀಡಿಯೋ ವೈರಲ್ ಆಗಿತ್ತು. ಇದು ವೈರಲ್ ಆಗುತ್ತಿದ್ದಂತೆ ಆತ ತಲೆ ಮರೆಸಿಕೊಂಡಿದ್ದ. 34 ದಿನಗಳ ನಂತರ ಅಧಿಕಾರಿಗಳು ಬಂಧಿಸಿದ್ದರು.