ಬೆಂಗಳೂರು : ಕಾಂಗ್ರೆಸ್ನಲ್ಲಿ ಸರ್ಕಾರ ರಚನೆಯ ಚಟುವಟಿಕೆ ಜೋರಾಗಿದೆ. ಶಾಸಕಾಂಗ ಸಭೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಅಲರ್ಟ್ ಆಗಿದ್ದಾರೆ. ಬೆಂಬಲಿಗರ ಜೊತೆಯಲ್ಲಿ ರಹಸ್ಯ ಮೀಟಿಂಗ್ ನಡೆಸಿದ್ದಾರೆ.

ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಶಾಸಕ ಭೈರತಿ ಸುರೇಶ್ ಅಪಾರ್ಟ್ಮೆಂಟ್ನಲ್ಲಿ ಸಿದ್ದರಾಮಯ್ಯ ಬೆಂಬಲಿಗರು ರಹಸ್ಯ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಕೆಜೆ ಜಾರ್ಜ್, ಭೈರತಿ ಬಸವರಾಜ್, ಎಂಬಿ ಪಾಟೀಲ್, ಜಮೀರ್ ಅಹಮದ್, ಎಂಬಿ ಪಾಟೀಲ್ , ಜಮೀರ್ ಅಹಮದ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ ಎನ್ನಲಾಗಿದೆ.